ಯಲ್ಲಮ್ಮನ ಗುಡ್ಡಕ್ಕೆ ವಿಶೇಷ ಬಸ್ ವ್ಯವಸ್ಥೆ

0
19


ಹುಬ್ಬಳ್ಳಿ : ಬೆಳಗಾವಿ ಜಿಲ್ಲೆಯ ಸೌದತ್ತಿಯ ಶ್ರೀ ರೇಣುಕಾ ದೇವಿಯ ರ‍್ಶನಕ್ಕೆ ತೆರಳುವ ಭಕ್ತಾದಿಗಳ ಅನುಕೂಲಕ್ಕಾಗಿ ರವಿವಾರ ಹುಣ್ಣಿಮೆಯಂದು ಮತ್ತು ಬರುವ ಅಮವಾಸೆಯವರೆಗೆ ಪ್ರತಿ ಮಂಗಳವಾರ ಹಾಗೂ ಶುಕ್ರವಾರ ದಂದು ಹುಬ್ಬಳ್ಳಿಯಿಂದ ಯಲ್ಲಮ್ಮನಗುಡ್ಡಕ್ಕೆ ವಿಶೇಷ ಬಸ್ ಗಳ ವ್ಯವಸ್ಥೆ ಮಾಡಲಾಗಿದೆ ಎಂದು ವಾಯವ್ಯ ರ‍್ನಾಟಕ ರಸ್ತೆ ಸಾರಿಗೆ ಸಂಸ್ಥೆಯಯ ಹುಬ್ಬಳ್ಳಿ ವಿಭಾಗೀಯ ನಿಯಂತ್ರಣಾಧಿಕಾರಿ ಎಚ್. ರಾಮನಗೌಡರ ತಿಳಿಸಿದ್ದಾರೆ.

ಕಳೆದ ಶೀಗಿ ಹುಣ್ಣಿಮೆ, ದೀಪಾವಳಿ ಅಮವಾಸೆ ಹಾಗೂ ನಂತರದ ಹುಣ್ಣಿಮೆಗಳ ಸಮಯದಲ್ಲಿ ಸೌದತ್ತಿಯ ಶ್ರೀ ರೇಣುಕಾ ದೇವಿಯ ರ‍್ಶನಕ್ಕೆ ತೆರಳುವ ಭಕ್ತಾದಿಗಳ ಅನುಕೂಲಕ್ಕಾಗಿ ಕಲ್ಪಿಸಲಾಗಿದ್ದ ವಿಶೇಷ ನೇರ ಬಸ್ ಗಳಿಗೆ ಸರ‍್ವಜನಿಕರಿಂದ ನಿರೀಕ್ಷೆಗೂ ಮೀರಿದ ಸ್ಪಂದನೆ ವ್ಯಕ್ತವಾಗಿದೆ.
ಈ ವಿಶೇಷ ನೇರ ಬಸ್ಸುಗಳಿಂದ ಸಾವಿರಾರು ಭಕ್ತಾದಿಗಳಿಗೆ ಬಹಳಷ್ಟು ಅನುಕೂಲವಾಗಿದೆ. ಬರುವ ಹುಣ್ಣಿಮೆಯ ದಿನ, ಮಂಗಳವಾರ ಹಾಗೂ ಶುಕ್ರವಾರದಂದು ಸಹ ಹುಬ್ಬಳ್ಳಿಯಿಂದ ಯಲ್ಲಮ್ಮನ ಗುಡ್ಡಕ್ಕೆ ವಿಶೇಷ ಹೆಚ್ಚುವರಿ ಬಸ್ಸುಗಳ ವ್ಯವಸ್ಥೆ ಮಾಡುವಂತೆ ಸರ‍್ವಜನಿಕರಿಂದ ಕೋರಿಕೆ ಬಂದಿರುತ್ತದೆ.

ಭಕ್ತಾದಿಗಳು, ಸರ‍್ವಜನಿಕರ ಬೇಡಿಕೆ ಹಿನ್ನೆಲೆಯಲ್ಲಿ ಡಿಸೆಂಬರ್ ಬರುವ ಹುಣ್ಣಿಮೆಯ ದಿನ ೧೫ ರಂದು ರವಿವಾರ ಹಾಗೂ ಮುಂದಿನ ಅಮವಾಸೆಯವರೆಗೆ ಪ್ರತಿ ಮಂಗಳವಾರ ಹಾಗೂ ಶುಕ್ರವಾರಗಳಂದು ಅಂದರೆ ಡಿಸೆಂಬರ್ ೧೭, ೨೦, ೨೪ ಹಾಗೂ ೨೭ರಂದು ಹುಬ್ಬಳ್ಳಿಯಿಂದ ಯಲ್ಲಮ್ಮನಗುಡ್ಡಕ್ಕೆ ವಿಶೇಷ ನೇರ ಬಸ್ಸುಗಳ ವ್ಯವಸ್ಥೆ ಮಾಡಲಾಗಿದೆ. ಈ ವಿಶೇಷ ಬಸ್ಸುಗಳು ಹುಬ್ಬಳ್ಳಿ ಹೊಸೂರು ಬಸ್ ನಿಲ್ದಾಣದಿಂದ ಹೊರಡುತ್ತವೆ. ಸರ‍್ವಜನಿಕರ ಪ್ರತಿಕ್ರಿಯೆ ಗಮನಿಸಿ ಈ ವಿಶೇಷ ಬಸ್ ಗಳ ವ್ಯವಸ್ಥೆಯನ್ನು ಮುಂದುವರೆಸುವ ಬಗ್ಗೆ ಪರಿಶೀಲಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

Previous articleಮೈಸೂರು ದರಸಾಕ್ಕಿಂತ ಅತೀ ವಿಜೃಂಭಣೆಯಿಂದ ಕಾಂಗ್ರೆಸ್ ಶತಮಾನೋತ್ಸವ
Next articleರಾಯಚೂರು ವಿವಿ ಸಹಾಯಕ ಪ್ರಾಧ್ಯಾಪಕರ ಪರೀಕ್ಷೆ  ಫಲಿತಾಂಶ ಪ್ರಕಟ