ಬೆಂಗಳೂರು: ನಟ ಯಶ್ ಹುಟ್ಟುಹಬ್ಬದ ಹಿನ್ನೆಲೆ ಶುಭಾಶಯ ಕೋರುವ ಬ್ಯಾನರ್ ಕಟ್ಟುವಾಗ ವಿದ್ಯುತ್ ಪ್ರವಹಿಸಿ ಮೂವರು ಮೃತ ದುರ್ದೈವಿಗಳಿಗೆ ತಲಾ 2 ಲಕ್ಷ ರೂಪಾಯಿಗಳ ಪರಿಹಾರ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶಿಸಿದ್ದಾರೆ.
ಈ ಪ್ರಕರಣ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ಫ್ಲೆಕ್ಸ್ ಕಟ್ಟುವ ವೇಳೆ ವಿದ್ಯುತ್ ಪ್ರವಹಿಸಿ ಮೂವರು ಯುವಕರು ಮೃತಪಟ್ಟ ಸುದ್ದಿ ತಿಳಿದು ಬೇಸರವಾಯಿತು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಬದುಕಿ ಬಾಳಬೇಕಿದ್ದ ಹುಡುಗರು ಹೀಗೆ ಅಚಾತುರ್ಯದಿಂದ ಸಾವಿಗೀಡಾಗಿದ್ದಾರೆ, ಅವರನ್ನು ನಂಬಿದ್ದ ಕುಟುಂಬವೀಗ ಸಂಕಷ್ಟಕ್ಕೆ ಸಿಲುಕಿದ್ದು ಆ ಕುಟುಂಬಗಳಿಗೆ ನೆರವಾಗುವ ದೃಷ್ಟಿಯಿಂದ ಮೃತ ದುರ್ದೈವಿಗಳಿಗೆ ತಲಾ 2 ಲಕ್ಷ ರೂಪಾಯಿಗಳ ಪರಿಹಾರ ನೀಡುವಂತೆ ಆದೇಶಿಸಿದ್ದೇನೆ ಎಂದರು.
