Home ತಾಜಾ ಸುದ್ದಿ ಯಾದಗಿರಿ ಜಿಲ್ಲಾ ಕೇಂದ್ರದಲ್ಲಿ ನೂತನ ವಿಶ್ವವಿದ್ಯಾಲಯ ಸ್ಥಾಪನೆಗೆ ಮನವಿ

ಯಾದಗಿರಿ ಜಿಲ್ಲಾ ಕೇಂದ್ರದಲ್ಲಿ ನೂತನ ವಿಶ್ವವಿದ್ಯಾಲಯ ಸ್ಥಾಪನೆಗೆ ಮನವಿ

0

ಯಾದಗಿರಿ: ಜಿಲ್ಲಾ ಕೇಂದ್ರದಲ್ಲಿ ನೂತನ ವಿಶ್ವವಿದ್ಯಾಲಯ ಸ್ಥಾಪನೆ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಗುರುಮಠಕಲ್ ಶಾಸಕ ಶರಣಗೌಡ ಕಂದಕೂರು ಪತ್ರ ಬರೆದಿದ್ದಾರೆ.
ಜಿಲ್ಲೆಯು ಆಂಧ್ರ ಮತ್ತು ತೆಲಂಗಾಣ ಗಡಿ ಭಾಗದಲ್ಲಿದ್ದು, ತೆಲುಗು ಪ್ರಭಾವ ವಿಪರೀತವಾಗಿದ್ದು, ತುಂಬಾ ಹಿಂದುಳಿದ ಜಿಲ್ಲೆಯಾಗಿದೆ. ಕನ್ನಡ ಪರವಾದ ಶೈಕ್ಷಣಿಕ ವಾತಾವರಣ ನಿರ್ಮಾಣ ಮಾಡಲು ಜಿಲ್ಲೆಗೆ ವಿಶ್ವವಿದ್ಯಾಲಯ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಜಿಲ್ಲೆಯ ವಿದ್ಯಾರ್ಥಿಗಳು ರಾಯಚೂರು, ಕಲಬುರಗಿ, ಧಾರವಾಡ ವಿಶ್ವವಿದ್ಯಾಲಯಗಳಿಗೆ ವಿದ್ಯಾಭ್ಯಾಸಕ್ಕಾಗಿ ಹೋಗುತ್ತಿದ್ದಾರೆ. ಜಿಲ್ಲೆಗೊಂದು ವಿಶ್ವವಿದ್ಯಾಲಯ ಇರಬೇಕು ಎಂದು ಸರಕಾರವೇ ಆದೇಶಿಸಿದ್ದರೂ, ಯಾದಗಿರಿ ನೂತನ ಜಿಲ್ಲೆಯಾಗಿ ದಶಕದ ಮೇಲಾದರೂ, ವಿಶ್ವವಿದ್ಯಾಲಯ ಸ್ಥಾಪನೆ ಆಗಿಲ್ಲ ಎಂದಿದ್ದಾರೆ.
ರಾಯಚೂರು ವಿಶ್ವವಿದ್ಯಾಲಯದಲ್ಲಿ ಶೇ. 60ಕ್ಕಿಂತ ಅಧಿಕ ಪದವಿ ಕಾಲೇಜುಗಳು ಯಾದಗಿರಿ ಜಿಲ್ಲೆಯಲ್ಲಿವೆ. ಇಂಡಿಯನ್ ಯುನಿವರಸಿಟಿ ಆಫ್ ಬೋರ್ಡ್ ಪ್ರಕಾರ 100 ಪದವಿ ಕಾಲೇಜಿಗೆ ಒಂದು ವಿಶ್ವವಿದ್ಯಾಲಯ ಇರಬೇಕಿದೆ. ಹಾಗಾಗಿ ಜಿಲ್ಲೆಯಲ್ಲಿ 100ಕ್ಕಿಂತಲೂ ಅಧಿಕ ಪದವಿ ಕಾಲೇಜುಗಳಿವೆ. ಕೇಂದ್ರ ಸರಕಾರದ ಮಹತ್ವಾಕಾಂಕ್ಷೆ ಜಿಲ್ಲೆಯೂ ಆಗಿರುವುದರಿಂದ ಸಾಮಾಜಿಕ ಹಾಗೂ ಸಾಂಸ್ಕೃತಿಕ ಮತ್ತು ಶೈಕ್ಷಣಿಕ ಅಭಿವೃದ್ಧಿಗೆ ವಿಶ್ವವಿದ್ಯಾಲಯ ಅವಶ್ಯಕವಾಗಿದೆ ಎಂದು ತಿಳಿಸಿದ್ದಾರೆ.

Exit mobile version