ಯಾರು ಏನೇ ಹೇಳಿದರೂ 20 ಲೋಕಸಭಾ ಸ್ಥಾನಗಳನ್ನು ಗೆಲ್ಲುವುದು ಖಚಿತ

0
14

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಕನಿಷ್ಠ 20 ಸ್ಥಾನಗಳನ್ನು ಈ ಬಾರಿ ಗೆದ್ದೇ ಗೆಲ್ಲುತ್ತೇವೆ. ಯಾರು ಏನೇ ಹೇಳಿದರೂ ನಾವು ನೂರಕ್ಕೆ ನೂರು ಗೆಲ್ಲುತ್ತೇವೆ. ಒಗ್ಗಟ್ಟಿನಿಂದ ಸಣ್ಣ ಪುಟ್ಟ ಭಿನ್ನಾಭಿಪ್ರಾಯಗಳಿದ್ದರೆ ಅದನ್ನು ಮರೆತು ಗೆಲ್ಲಲೇಬೇಕು ಎಂಬ ಛಲದಿಂದ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.
ಅವರು ಇಂದು ಕೆಪಿಸಿಸಿ ಕಛೇರಿಯಲ್ಲಿ ಮುದ್ದಹನುಮೇಗೌಡ ಅವರ ಕಾಂಗ್ರೆಸ್ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮುದ್ದುಹನುಮೇಗೌಡರು ಮೂಲತಃ ಕಾಂಗ್ರೆಸ್‌ನವರು. ಕಳೆದ ವಿಧಾನಸಭೆಗೂ ಮುನ್ನ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದರು. ಅವರ ತಪ್ಪಿನ ಅರಿವಾಗಿ ಕಾಂಗ್ರೆಸ್ ಪಕ್ಷಕ್ಕೆ ಮರಳಿ ಸೇರ್ಪಡೆಯಾಗಿದ್ದಾರೆ. ತಪ್ಪು ಮಾಡಿದ್ದೇನೆ, ಕ್ಷಮೆ ಇರಲಿ ಎಂದು ಅವರು ಹೇಳಿದ್ದಾರೆ. ತಪ್ಪು ಮಾಡಿದ ಮೇಲೆ ಪಶ್ಚಾತ್ತಾಪ ಮುಖ್ಯ. ಪಶ್ಚಾತ್ತಾಪಕ್ಕಿಂತ ದೊಡ್ಡ ಶಿಕ್ಷೆ ಮತ್ತೊಂದಿಲ್ಲ. ಪಕ್ಷಕ್ಕೆ ಯಾರೇ ಬಂದರೂ, ಬೇರೆ, ನಮ್ಮ ಪಕ್ಷದವರನ್ನೂ ನಮ್ಮ ಪಕ್ಷಕ್ಕೆ ಸೇರಿಸಿಕೊಳ್ಳುತ್ತೇವೆ ಎಂದು ಪಕ್ಷದ ಅಧ್ಯಕ್ಷರು ಹೇಳಿದ್ದಾರೆ. ಎಲ್ಲಾ ಜಿಲ್ಲೆಯ ಮುಖಂಡರೆಲ್ಲರೂ ಸೇರಿ ಅವರನ್ನು ಸೇರಿಸಿಕೊಳ್ಳಲು ಒಪ್ಪಿದ್ದಾರೆ ಎಂದರು.

Previous articleಸಂಕಷ್ಟಕ್ಕೆ ಸಿಲುಕಲಿದೆ ಮನುಕುಲ
Next articleಬಾಹುಬಲಿ ಸಂದೇಶದಿಂದ ರಾಷ್ಟ್ರದಲ್ಲಿ ಧರ್ಮಪ್ರಭಾವನೆಯ ಸಂಸ್ಕಾರ ಬೆಳೆಯಲಿ