ಯುಗಾದಿ ಹಬ್ಬಕ್ಕೆ ಬರುವಾಗ ಅಪಘಾತ: ಇಬ್ಬರು ಸಾವು

0
21

ದಾವಣಗೆರೆ: ಯುಗಾದಿ ಹಬ್ಬಕ್ಕೆಂದು ಊರಿಗೆ ಬರುವಾಗ ಜಿಲ್ಲೆಯ ಚನ್ನಗಿರಿ ತಾಲೂಕಿನ ಬೀರೂರು ಹಾಗೂ ಸಮ್ಮಸಗಿ ರಾಜ್ಯ ಹೆದ್ದಾರಿಯ ಗುಳ್ಳೇಹಳ್ಳಿಯಲ್ಲಿ ಅಪರಚಿತ ವಾಹನವೊಂದು ಡಿಕ್ಕಿ ಹೊಡೆದು ಇಬ್ಬರು ಬೈಕ್ ಸವಾರರು ಮೃತಪಟ್ಟಿರುವ ಘಟನೆ ನಡೆದಿದೆ.

ಅರ್ಜುನ್ ನಾಯ್ಕ (25), ಹರೀಶ್ ನಾಯ್ಕ (31) ಮೃತ ಯುವಕರು.

ಅಪರಿಚಿತ ವಾಹನ ಡಿಕ್ಕಿಯಿಂದ ಮೃತ ಯುವಕರು ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಬೆಂಡಿಗೆರೆ ಸಣ್ಣ ತಾಂಡಾ ಮತ್ತು ಹೊಸಹಟ್ಟಿ ತಾಂಡಾದ ನಿವಾಸಿಗಳೆಂದು ಗುರುತಿಸಲಾಗಿದೆ.

 ಮೃತ ಇಬ್ಬರು ಯುವಕರು ಚಿಕ್ಕಮಗಳೂರು ಜಿಲ್ಲೆಯಲ್ಲಿ ಕೂಲಿ ಕೆಲಸ ಮಾಡುತ್ತಿದ್ದರು. ಯುಗಾದಿ ಹಬ್ಬ ಇರುವ ಕಾರಣ ತಮ್ಮ ದ್ವಿಚಕ್ರ ವಾಹನದಲ್ಲಿ ಯುವಕರು ಊರಿಗೆ ಮರಳುವ ವೇಳೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದಿದೆ. ಪರಿಣಾಮ ಇಬ್ಬರು ಬೈಕ್ ಸವಾರರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಚನ್ನಗಿರಿ ಪೊಲೀಸ್ ಠಾಣೆಯ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Previous articleಸೆಟ್ ಆಗೋಲ್ಲ… ಅಂದ KD ಬಿಡುಗಡೆ
Next articleಸ್ಪೀಕರ್ ಸರಕಾರದ ಏಜೆಂಟ್