ಯುವನಿಧಿ ಯೋಜನೆಗೆ ಚಾಲನೆ

0
16

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದ 5ನೇ ಗ್ಯಾರಂಟಿ‌ ʼಯುವನಿಧಿ ಯೋಜನೆʼ ನೋಂದಣಿ ಪ್ರಕ್ರಿಯೆಗೆ ಇಂದು ಚಾಲನೆ ನೀಡಲಾಯಿತು.
ನಗರದ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮೊದಲು ಸಿಎಂ ಮತ್ತು ಗಣ್ಯರು, ಓರ್ವ ಯುವತಿ ಹಾಗೂ ಯುವಕನನ್ನ ವೇದಿಕೆ ಮೇಲೆ ಕರೆಸಿ ಜ್ಯೋತಿ ಬೆಳಗುವ ಮೂಲಕ ಚಾಲನೆ ನೀಡಿದರು. ಯುವನಿಧಿ ಯೋಜನೆ ಪೋಸ್ಟರ್ ಹಾಗೂ ಲೋಗೋ ಬಿಡುಗಡೆ ಮಾಡಿ ನೋಂದಣಿ ಪ್ರಕ್ರಿಯೆಗೆ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು. ಆನ್‌ ಲೈನ್ ಮೂಲಕ ನೋಂದಣಿ ಮಾಡಲು ಅವಕಾಶ ಇದ್ದು https://sevasindhugs.karnataka.gov.in/ ಮೂಲಕ ಅರ್ಜಿ ಸಲ್ಲಿಸಬಹುದು. ಇನ್ನು ಈ ಯೋಜನೆಯ ಲಾಭ ಪಡೆದುಕೊಳ್ಳುವವರು ಸೇವಾ ಸಿಂಧು ಪೋರ್ಟಲ್ ನಲ್ಲಿ ಮಾಸಿಕವಾಗಿ ನಿರುದ್ಯೋಗ ದೃಢೀಕರಣ ಮಾಡಿಸಿಕೊಳ್ಳಬೇಕು.

Previous articleಮಾತು ತಪ್ಪಿದ ಮೋದಿಯವರೇ ನಿಮ್ಮ ಮಾತು ಏನಾಯ್ತು?
Next articleಬಿಜೆಪಿ ಮುರುಕಲು ಮನೆ