ಬೆಂಗಳೂರು: ನ್ಯಾಯಾಲಯದ ಆದೇಶ ಉಲ್ಲಂಘನೆ ಮಾಡಿರುವ ಹಿನ್ನೆಲೆಯಲ್ಲಿ ಯೂಟ್ಯೂಬರ್ ಸಮೀರ್ ಎಂ.ಡಿ. ವಿರುದ್ಧ 10 ಕೋಟಿ ರೂ. ಮಾನನಷ್ಟ ಮೊಕದ್ದಮೆ ದಾಖಲು ಮಾಡಲಾಗಿದೆ.
ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀಕ್ಷೇತ್ರದ ಧರ್ಮಸ್ಥಳವನ್ನು ಗುರಿಯಾಗಿಟ್ಟುಕೊಂಡು ಯೂ ಟ್ಯೂಬರ್ ಸಮೀರ್ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದ. ಈ ವಿಷಯವಾಗಿ ನ್ಯಾಯಾಲಯ ಸೂಚನೆ ನೀಡಿ ವಿಡಿಯೋವನ್ನು ಡಿಲಿಟ್ ಮಾಡುವಂತೆ ಸೂಚಿಸಿತ್ತಲ್ಲದೆ, ಮತ್ತೆ ಇಂತಹ ವಿಡಿಯೋ ಮಾಡದಂತೆ ತಡೆಯಾಜ್ಞೆ ನೀಡಿತ್ತು. ಆದರೆ, ಸಮೀರ್ ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿ ಎರಡನೆ ವಿಡಿಯೋವನ್ನು ಹರಿಬಿಟ್ಟಿದ್ದ. ಈ ಹಿನ್ನೆಲೆಯಲ್ಲಿ ಧರ್ಮಸ್ಥಳ ಡಿ. ಹರ್ಷೇಂದ್ರ ಕುಮಾರ್ ಮತ್ತು ನಿಶ್ಚಲ್ ಡಿ. ಎಂಬುವವರು ಸಮೀರ್ ವಿರುದ್ಧ ಹಾಗೂ ಯೂ ಟ್ಯೂಬ್ ಚಾನಲ್ ವಿರುದ್ಧ ೧೦ ಕೋಟಿ ಮಾನನಷ್ಟ ಮೊಕದ್ದಮೆಯನ್ನು ಹೂಡಿದ್ದಾರೆ. ನ್ಯಾಯಾಲಯವು ಯೂಟ್ಯೂಬರ್‌ಗೆ ನೋಟಿಸ್ ಜಾರಿ ಮಾಡಿ, ಹಾಜರಾಗುವಂತೆ ಸೂಚನೆಯನ್ನು ನೀಡಿದೆ. ಹಾಗೂ ನ್ಯಾಯಾಲಯದ ಆದೇಶ ಉಲ್ಲಂಘಿಸಿ ಹರಿಬಿಟ್ಟಿದ್ದ ವಿಡಿಯೋ ತಕ್ಷಣ ಡಿಲೀಟ್ ಮಾಡಲು ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಲಯ ಆದೇಶ ಮಾಡಿದೆ. ಧರ್ಮಸ್ಥಳ ಪರ ರಾಜಶೇಖರ ಹಿಲ್ಯಾರ್ ಮಂಡಿಸಿದ ವಾದವನ್ನು ಆಲಿಸಿದ ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಧೀಶರಾದ ಎಸ್. ನಟರಾಜ್ ಅವರು ಈ ಆದೇಶ ಮಾಡಿದ್ದಾರೆ.