Home ತಾಜಾ ಸುದ್ದಿ ಯೋಗೀಶ್ ಗೌಡ ಕೊಲೆ ಪ್ರಕರಣ : ಶಾಸಕ ವಿನಯ್ ಕುಲಕರ್ಣಿ ಸಿಬಿಐ ವಶಕ್ಕೆ

ಯೋಗೀಶ್ ಗೌಡ ಕೊಲೆ ಪ್ರಕರಣ : ಶಾಸಕ ವಿನಯ್ ಕುಲಕರ್ಣಿ ಸಿಬಿಐ ವಶಕ್ಕೆ

0

ಬೆಂಗಳೂರು : ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದ ಆರೋಪಿ ಮಾಜಿ ಸಚಿವ ವಿನಯ್​​ ಕುಲಕರ್ಣಿ ನ್ಯಾಯಾಲಯದ ಮುಂದೆ ಶರಣಾಗಿದ್ದಾರೆ.
ಸುಪ್ರೀಂಕೋರ್ಟ್‌ನಿಂದ ಜಾಮೀನು ರದ್ದು ಹಿನ್ನಲೆಯಲ್ಲಿ ವಿನಯ್​​ ಕುಲಕರ್ಣಿ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಶರಣಾಗಿದ್ದಾರೆ. ಬಿಜೆಪಿ ಮುಖಂಡ ಯೋಗೀಶ್‌ಗೌಡ ಹತ್ಯೆ ಪ್ರಕರಣದಲ್ಲಿ ಧಾರವಾಡ ಶಾಸಕ ವಿನಯ್‌ ಕುಲಕರ್ಣಿ ಅವರಿಗೆ ಮಂಜೂರು ಮಾಡಲಾಗಿದ್ದ ಜಾಮೀನನ್ನು ಇತ್ತೀಚಿಗೆ ಸುಪ್ರೀಂಕೋರ್ಟ್ ರದ್ದುಗೊಳಿಸಿತ್ತು. ಅಲ್ಲದೆ, ಒಂದು ವಾರದೊಳಗೆ ವಿಚಾರಣಾ ನ್ಯಾಯಾಲಯದ ಮುಂದೆ ಶರಣಾಗುವಂತೆ ಕುಲಕರ್ಣಿಗೆ ಆದೇಶ ನೀಡಿತ್ತು.ಈ ಹಿನ್ನೆಲೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಕ್ಕೆ ವಿನಯ್​​ ಕುಲಕರ್ಣಿ ಹಾಜರಾಗಿದ್ದು, ನ್ಯಾಯಾಲಯ ಅವರನ್ನು ಸಿಬಿಐ ವಶಕ್ಕೆ ನೀಡಿ ಆದೇಶ ಹೊರಡಿಸಿದೆ.

ಕಲಬುರಗಿ ಆವೃತ್ತಿ ರಜತ ಸಂಭ್ರಮ

Exit mobile version