`ಯೋಗೇಶ್ವರ ಕಾಂಗ್ರೆಸ್ ಸೇರಿದ್ದು ದುರಂತ’

0
20

ಹಾವೇರಿ: ಮಾಜಿ ಸಚಿವ ಸಿ.ಪಿ. ಯೋಗೇಶ್ವರ್ ಅವರನ್ನು ಪಕ್ಷದಲ್ಲಿ ಉಳಿಸಿಕೊಳ್ಳಲು ಬಹಳ ಪ್ರಯತ್ನ ಮಾಡಿದ್ದೇವೆ. ಅವರು ಕಾಂಗ್ರೆಸ್ ಸೇರಿರುವುದು ದೊಡ್ಡ ದುರಂತ. ಕಾಂಗ್ರೆಸ್‌ಗೆ ಯಾರೂ ಅಭ್ಯರ್ಥಿ ಇರಲಿಲ್ಲ. ಅಲ್ಲಿ ಸುಲಭವಾಗಿ ಎನ್‌ಡಿಎ ಅಭ್ಯರ್ಥಿ ಗೆಲ್ಲಬಹುದು ಎಂದು ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.
ಶಿಗ್ಗಾವಿಯಲ್ಲಿ ಮಾಧ್ಯಮಗಳೊಂದಿಗೆ ಅವರು ಮಾತನಾಡಿ, ಚನ್ನಪಟ್ಟಣ ಕ್ಷೇತ್ರದಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ಪ್ರಭಾವ ಇದೆ. ಹಿಂದೆ ಬಿಜೆಪಿ ಜೆಡಿಎಸ್, ಕಾಂಗ್ರೆಸ್ ಮೂರು ಪಕ್ಷಗಳು ಸ್ಪರ್ಧೆ ಮಾಡಿ ತ್ರಿಕೋನ ಸ್ಪರ್ಧೆ ಇದ್ದಾಗಲೂ ಕುಮಾರಸ್ವಾಮಿಯವರು ಗೆಲುವು ಸಾಧಿಸಿದ್ದಾರೆ. ಈ ಉಪ ಚುನಾವಣೆಯಲ್ಲಿಯೂ ಜೆಡಿಎಸ್ ಅಭ್ಯರ್ಥಿಯೇ ಗೆಲ್ಲುತ್ತಾರೆ ಎಂಬ ವಿಶ್ವಾಸ ನನಗಿದೆ ಎಂದು ಹೇಳಿದರು.

Previous articleಕುಡಚಿ ರೈಲು ಹಳಿ ಬಳಿ ಭೂ ಕುಸಿತ
Next articleಮಾತೃಪಕ್ಷಕ್ಕೆ ಬಂದ ಸಿಪಿವೈ ಅಭ್ಯರ್ಥಿಯಾದರೆ ಇನ್ನೂ ಸಂತೋಷ