ಬೆಂಗಳೂರು: ಸಂತ್ರಸ್ತೆಯೊಬ್ಬರ ಅಪಹರಣದ ಪ್ರತ್ಯೇಕ ಎಫ್ಐಆರ್‌ಗೆ ಸಂಬಂಧಿಸಿದಂತೆ ಹೊಳೆನರಸೀಪುರ ಶಾಸಕ ಎಚ್ ಡಿ ರೇವಣ್ಣ ಅವರನ್ನು ಬಂಧಿಸದಂತೆ ರಕ್ಷಣೆ ನೀಡಿದರೆ ಇಂದೇ ಎಸ್ಐಟಿ ಮುಂದೆ ಹಾಜರಾಗುತ್ತಾರೆ ಎಂದು ಅವರ ಪರ ವಕೀಲರು ನ್ಯಾಯಾಲಯಕ್ಕೆ ಭರವಸೆ ನೀಡಿದ್ದಾರೆ. ಇಂದೇ ಆಕ್ಷೇಪಣೆ ಸಲ್ಲಿಸಿ ಎಂದು ಸೂಚಿಸಿದ ನ್ಯಾಯಾಧೀಶರು, ವಿಚಾರಣೆಯನ್ನು ಮಧ್ಯಾಹ್ನಕ್ಕೆ ಮುಂದೂಡಿದ್ದಾರೆ.
























