ಬೆಂಗಳೂರು: ಬೇಡಿಕೆಗೆ ಅನುಗುಣವಾಗಿ ರಸಗೊಬ್ಬರಗಳನ್ನು ಪೂರೈಸುವಂತೆ ಸಂಸದ ಜಗದೀಶ್ ಶೆಟ್ಟರ್ ಅವರು ಕೇಂದ್ರ ರಸಗೊಬ್ಬರ ಸಚಿವ ಜೆ.ಪಿ.ನಡ್ಡಾ ಅವರಿಗೆ ಪತ್ರ ಬರೆದಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿ ಕರ್ನಾಟಕ ರಾಜ್ಯಕ್ಕೆ ಮುಂಗಾರು ಮಳೆಯ ಆಗಮನದ ಹಿನ್ನೆಲೆಯಲ್ಲಿ ರೈತರು ಬಿತ್ತನೆ ಆರಂಭಿಸುತ್ತಿದ್ದಾರೆ, ನಮ್ಮ ಬೆಳಗಾವಿ ಜಿಲ್ಲೆಯಲ್ಲಿ 7,32,361 ಹೆಕ್ಟೇರ್ ಕೃಷಿ ಕ್ಷೇತ್ರವಿದ್ದು, ಎಲ್ಲ ಗ್ರೇಡ್ ರಸಗೊಬ್ಬರ ಸೇರಿ ಬೇಡಿಕೆ ಸುಮಾರು 2,43,299 ಟನ್‌ಗಳಷ್ಟಿದ್ದು, ಇದರಲ್ಲಿ DAP ರಸಗೊಬ್ಬರದ ಅವಶ್ಯಕತೆ 20,732 ಟನ್‌ಗಳಷ್ಟಿದೆ.
ಈ ಹಿನ್ನೆಲೆಯಲ್ಲಿ ನಮ್ಮ ಬೆಳಗಾವಿ ಜಿಲ್ಲೆಯ ರೈತರಿಗೆ ಬಿತ್ತನೆ ಕಾರ್ಯ ಕೈಗೊಳ್ಳಲು ಅನುಕೂಲವಾಗುವಂತೆ ಜಿಲ್ಲೆಯ ಬೇಡಿಕೆಗೆ ಅನುಗುಣವಾಗಿ ಅಗತ್ಯ ಪ್ರಮಾಣದಲ್ಲಿ DAP ರಸಗೊಬ್ಬರದೊಂದಿಗೆ ಎಲ್ಲ ಗ್ರೇಡ್‌ನ ರಸಗೊಬ್ಬರಗಳ ಪೂರೈಕೆ ಆಗುವಂತೆ ಕ್ರಮವಹಿಸಲು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಜೆ ಪಿ ನಡ್ಡಾ ಅವರಿಗೆ ಪತ್ರ ಬರೆಯುವ ಮೂಲಕ ವಿನಂತಿಸಿದ್ದೇನೆ ಎಂದಿದ್ದಾರೆ.