ರಸ್ತೆ ಅಪಘಾತ: ಓರ್ವ ಸಾವು

0
29

ಬಾಗಲಕೋಟೆ(ಕುಳಗೇರಿ ಕ್ರಾಸ್): ರಾಷ್ಟ್ರೀಯ ಹೆದ್ದಾರಿ ೨೧೮ರ ಪಕ್ಕದಲ್ಲಿ ವಾಹನ ನಿಲ್ಲಿಸಿ ರಸ್ತೆ ದಾಟುತ್ತಿದ್ದ ವೇಳೆ ಸಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಓರ್ವ ವ್ಯಕ್ತಿ ಮೃತಪಟ್ಟಿದ್ದಾನೆ.
ಮೃತನನ್ನು ಕಲ್ಲಪ್ಪ ಮಲಕಾರಿ ಬಿಸನಾಳ(55) ಎಂದು ಗುರುತಿಸಲಾಗಿದೆ. ಇವರು ಇಂಡಿ ತಾಲೂಕಿನ ಸಂಗೋಗಿ ಗ್ರಾಮದವರೆಂದು ತಿಳಿದು ಬಂದಿದೆ. ಮೃತ ವ್ಯಕ್ತಿ ಕುಟುಂಬದವರು ಸವದತ್ತಿ ಯಲ್ಲಮ್ಮನ ದೇವಸ್ಥಾನಕ್ಕೆ ಹೋಗಿ ಮರಳಿ ಗ್ರಾಮಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಹೆದ್ದಾರಿ ಪಕ್ಕ ವಿಶ್ರಾಂತಿಗಾಗಿ ನಿಲ್ಲಿಸಿ ರಸ್ತೆ ದಾಟುತ್ತಿದ್ದ ವೇಳೆ ಹುಬ್ಬಳ್ಳಿಯಿಂದ ಬಾಗಲಕೋಟೆಗೆ ತೆರಳುತ್ತಿದ್ದ ಬೀಳಗಿ ಘಟಕದ ಬಸ್ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಬಾದಾಮಿ ಪಿಎಸ್‌ಐ ವಿಠಲ್ ನಾಯಿಕ ಭೆಟ್ಟಿ ನೀಡಿ ಪರಿಶೀಲಿಸಿದ್ದಾರೆ.

Previous articleವರೂರು ನವಗ್ರಹ ತೀರ್ಥ ಕ್ಷೇತ್ರ ಪ್ರವಾಸೋದ್ಯಮ ಅಭಿವೃದ್ಧಿಗೆ ₹ 2 ಕೋಟಿ
Next articleಜಾತ್ರೆಗೆ ಬಂದಿದ್ದ ಬಾಲಕರು ನೀರಲ್ಲಿ ಮುಳುಗಿ ಸಾವು