ರಸ್ತೆ ಅಪಘಾತ: ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ ಪರಿಹಾರ ಘೋಷಿಸಿದ ಸಿಎಂ

0
15

ಕುಷ್ಟಗಿ: ವಿಜಯಪುರ- ಹೊಸಪೇಟೆ ರಾಷ್ಟ್ರೀಯ ಹೆದ್ದಾರಿಯ ಕುಷ್ಟಗಿ ತಾಲೂಕಿನ ಕಲಕೇರಿ ಬಳಿ ಭಾನುವಾರ ಸಂಜೆ ಲಾರಿ ಮತ್ತು ಕಾರು ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಸಿಎಂ ಸಿದ್ದರಾಮಯ್ಯ ಅವರು ತಲಾ 2ಲಕ್ಷ ರೂ ಪರಿಹಾರ ಘೋಷಣೆ ಮಾಡಿರುವ ವಿಚಾರವನ್ನು ತಮ್ಮ ಟ್ವಿಟ್ ಖಾತೆಯಲ್ಲಿ ತಿಳಿಸಿದ್ದಾರೆ.
ತಾಲೂಕಿನ ಕಲ್ಲಕೇರಿ ಹತ್ತಿರ ಸಂಭವಿಸಿದ ಭೀಕರ ಅಪಘಾತದಲ್ಲಿ ಸಂಭವಿಸಿದ್ದು. ವಿಜಯಪುರ ಮೂಲದವರಾದ ರಾಜಪ್ಪ ಬನಸೂಡಿ(೪೦),ರಾಘವೇಂದ್ರ ಕಾಂಬಳೆ(೨೪),ಜಯಶ್ರೀ(೨೬)ಮಕ್ಕಳಾದ
ಅಕ್ಷಯ ಶಿವಶರಣ(೬),ಚಿಕ್ಕ ರಾಕಿ(೪) ಹಾಗೂ ರಶ್ರೀತಾ(೨) ಸೇರಿದಂತೆ 6 ಮಂದಿ ಸಾವಿಗೀಡಾದ ಸುದ್ದಿ ತಿಳಿದ ತಕ್ಷಣ ಮೃತರ ಆತ್ಮಕ್ಕೆ ಶಾಂತಿ ಕೋರುತ್ತೇನೆ. ಮೃತ ದುರ್ದೈವಿಗಳ ಕುಟುಂಬಕ್ಕೆ ಸರ್ಕಾರದಿಂದ ತಲಾ ರೂ. 2 ಲಕ್ಷ ಪರಿಹಾರ ನೀಡಲಾಗುವುದು ಎಂದು ತಿಳಿಸಿದ್ದಾರೆ.
ಅತಿಯಾದ ವೇಗ, ಅಜಾಗರೂಕತೆಗಳೆ ಇಂಥ ಅಪಘಾತಗಳಿಗೆ ಕಾರಣ, ಎಚ್ಚರಿಕೆಯಿಂದ ವಾಹನ ಚಾಲನೆ ಮಾಡಿ, ಸುರಕ್ಷಿತವಾಗಿರಿ ಎಂದು ಸಿಎಂ ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.

Previous articleತಾಂತ್ರಿಕ ಸಮಸ್ಯೆ ಹಿನ್ನೆಲೆ ವಿಮಾನ ಸಂಚಾರದಲ್ಲಿ ವ್ಯತ್ಯಯ
Next articleನೂತನ ಸಚಿವರಿಗೆ ಅಧಿಕೃತವಾಗಿ ಖಾತೆ ಹಂಚಿಕೆ