ವಿಜಯಪುರ: ಕರ್ನಾಟಕದಲ್ಲಿ ರಾಜಕಾರಣ ಗಬ್ಬೆದು ಹೋಗಿದೆ. ಬಿಜೆಪಿ ಒಂದು ಕುಟುಂಬದ ಕೈಯಲ್ಲಿ ಸಿಲುಕಿದೆ. ಹೊಂದಾಣಿಕೆ ರಾಜಕೀಯವು ಹಿರಿಯ ಕಾರ್ಯಕರ್ತರಿಗೆ ನೋವಾಗಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಕೆ. ಎಸ್. ಈಶ್ವರಪ್ಪ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ನಲ್ಲಿ ಎಲ್ಲರೂ ನಾನು ಸಿಎಂ ಆಗುತ್ತೇನೆ ಎಂದು ಹೇಳುತ್ತಿದ್ದಾರೆ. ಬಾಯಿ ಮುಚ್ಚಿಕೊಂಡು ಇರುವಂತೆ ಸ್ವತಃ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿದರೂ ಬೆಲೆ ಕೊಡುತ್ತಿಲ್ಲ ಎಂದು ಪ್ರಸ್ತುತ ರಾಜಕೀಯ ವಿದ್ಯಮಾನವನ್ನು ಈಶ್ವರಪ್ಪ ಖಾರವಾಗಿ ವಿಶ್ಲೇಷಿಸಿದರು.
ಖರ್ಗೆ ಸಾಹೇಬರು ಮುತ್ಸದ್ಧಿ ರಾಜಕಾರಣಿ, ಅವರ ಬಗ್ಗೆ ನನಗೆ ಗೌರವವಿದೆ, ಆದರೆ ಕುಂಭಮೇಳಕ್ಕೆ ಸಂಬಂಧಿಸಿದಂತೆ ಅವರು ನೀಡಿದ ಹೇಳಿಕೆ ಖಂಡನೀಯ, ಹಿಂದೂ ಸಮಾಜದ ಬಗ್ಗೆ ಖರ್ಗೆ ಬಾಯಿ ಮುಚ್ಚಿಕೊಂಡು ಇರಬೇಕು. ಸಮಾಜವನ್ನು ಕೆಣಕಬೇಡಿ. ಕುಂಭಮೇಳ ಬಗ್ಗೆ ಮಾತನಾಡಿದ ಡಿ.ಕೆ. ಶಿವಕುಮಾರ್, ಕುಂಭ ಮೇಳದಲ್ಲಿ ಭಾಗಿಯಾದ ಯು.ಟಿ.ಖಾದರ್ ಅವರ ನಡೆಯನ್ನು ಖಂಡಿಸುತ್ತೀರಾ? ಕಾಂಗ್ರೆಸ್‌ನಿಂದ ಯಾರೂ ಭಾಗಿಯಾಗಬೇಡಿ ಎಂದು ಹೇಳಲು ಸಾಧ್ಯವೇ? ಎಂದು ಪ್ರಶ್ನಿಸಿದರು.