ಹುಬ್ಬಳ್ಳಿ: ಪ್ರಧಾನಿ ನರೇಂದ್ರ ಮೋದಿ ಅವರು ಅಬಕಾರಿ ವಿಚಾರದಲ್ಲಿ ಸುಳ್ಳು ಆರೋಪ ಮಾಡುತ್ತಿದ್ದಾರೆ. ಮೋದಿ ಅವರಿಗೆ ರಾಜ್ಯದ ಇಂತಹ ವಿಚಾರಗಳಷ್ಟೇ ಗೊತ್ತಾಗುತ್ತದೆ. ಬೇರೆ ಏಕೆ ಗೊತ್ತಾಗುತ್ತಿಲ್ಲ ಎನ್ನುವುದು ಸೇರಿದಂತೆ ಆರೋಪ ನಿಜವಾದರೆ, ರಾಜಕೀಯ ನಿವೃತ್ತಿ ಷೋಷಣೆ ಮಾಡುತ್ತೇನೆ ಎಂಬ ಸಿದ್ದರಾಮಯ್ಯ ಹೇಳಿಕೆಯಲ್ಲ ಡ್ರಾಮಾ ಬಾಜಿ ಸ್ಟಂಟ್ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವ್ಯಂಗ್ಯವಾಡಿದರು.
ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಬಕಾರಿ ಇಲಾಖೆಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ನಾವು ಹೇಳಿದಲ್ಲ, ರಾಜ್ಯ ಸರಕಾರದ ಅಡಿಯಲ್ಲಿರುವ ಡೀರ‍್ಸ್ ಆರೋಪಿಸಿದ್ದಾರೆ. ಅಬಕಾರಿ ಸಚಿವರನ್ನು ಕೈ ಬಿಡಬೇಕು ಎಂದು ಡೀರ‍್ಸ್ ಆಗ್ರಹಿಸಿದ್ದಾರೆ. ಸಿದ್ದರಾಮಯ್ಯ ಅವರು ಯಾರ ಮೇಲೆ ಕ್ರಮ ಕೈಗೊಂಡಿದ್ದಾರೆ. ವ್ಯಾಪಾರಸ್ಥರು ಹತಾಶರಾಗಿ ಆರೋಪ ಮಾಡಿದ್ದಾರೆ. ಇದನ್ನು ಸಿದ್ದರಾಮಯ್ಯ ಅವರು ಸರಿಪಡಿಸಿಕೊಳ್ಳಲಿ ಎಂದು ಹೇಳಿದರು.