ರಾಜನಾಥಸಿಂಗ್- ಎಂ.ಬಿ.ಪಾಟೀಲ್ ಮಹತ್ವದ ಮಾತುಕತೆ

0
13

ನವದೆಹಲಿ: ಕೇಂದ್ರ ರಕ್ಷಣಾ ಸಚಿವ ರಾಜನಾಥಸಿಂಗ್ ಅವರೊಂದಿಗೆ ಏರೋಸ್ಪೇಸ್ ಮತ್ತು ರಕ್ಷಣಾ ವಲಯಕ್ಕೆ ಸಂಬಂಧಿಸಿದ ಪ್ರಮುಖ ವಿಷಯಗಳ ಕುರಿತು ಚರ್ಚಿಸಲಾಯಿತು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದು ಕೇಂದ್ರ ರಕ್ಷಣಾ ಸಚಿವ ರಾಜನಾಥಸಿಂಗ್ ಅವರೊಂದಿಗೆ ಮಹತ್ವದ ಮಾತುಕತೆ ನಡೆಸಿದೆ. ಈ ವೇಳೆ ಏರೋಸ್ಪೇಸ್ ಮತ್ತು ರಕ್ಷಣಾ ವಲಯಕ್ಕೆ ಸಂಬಂಧಿಸಿದ ಪ್ರಮುಖ ವಿಷಯಗಳ ಕುರಿತು ಚರ್ಚಿಸಿದೆವು.

  • # ಕರ್ನಾಟಕದಲ್ಲಿ ರಕ್ಷಣಾ ಕಾರಿಡಾರ್‌ಗಳನ್ನು ಸ್ಥಾಪಿಸುವುದು.
  • # ರಕ್ಷಣಾ ಕಂಪನಿಗಳ ದೇಶೀಯ ಉತ್ಪಾದನೆ ಮತ್ತು ರಫ್ತಿನ ಮೇಲಿನ ನಿರ್ಬಂಧಗಳ ಕುರಿತು.
  • # ರಾಜ್ಯದಲ್ಲಿ ಹೂಡಿಕೆ ಮಾಡಲು ಮತ್ತು ವ್ಯವಹಾರ ವಿಸ್ತರಿಸಲು CPSU ಗಳನ್ನು ಉತ್ತೇಜಿಸುವುದು.
  • # ಕಾರವಾರ ನೌಕಾ ವಿಮಾನ ನಿಲ್ದಾಣದ ರನ್ ವೇಯನ್ನು 2000ಮೀ.ನಿಂದ 2,700ಮೀ.ವರೆಗೆ ವಿಸ್ತರಿಸುವುದು.
    # ರಾಜ್ಯವು ಏರೋಸ್ಪೇಸ್ ಮತ್ತು ರಕ್ಷಣಾ ವಲಯದ ಉತ್ಪಾದನೆ ಹಾಗೂ ತಾಂತ್ರಿಕ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿದ್ದು, ಹಲವು ದಶಕಗಳಿಂದ ದೇಶಕ್ಕೆ ಅಮೂಲ್ಯ ಕೊಡುಗೆಗಳನ್ನು ನೀಡುತ್ತಾ ಬಂದಿದೆ. ಅದನ್ನು ಮತ್ತಷ್ಟು ಸಶಕ್ತಗೊಳಿಸಲಾಗುತ್ತಿದೆ ಎಂದಿದ್ದಾರೆ.

GIM2025 ಭಾಗವಹಿಸುವಂತೆ ಸಿಂಗಾಪುರ್ ಹೈ ಕಮಿಷನರ್‌ಗೆ ಆಹ್ವಾನ: ಹೂಡಿಕೆದಾರರನ್ನು ನಮ್ಮ ರಾಜ್ಯದತ್ತ ಆಕರ್ಷಿಸುವ ಮತ್ತು #GIM2025 ರಲ್ಲಿ ಭಾಗವಹಿಸುವಂತೆ ಆಹ್ವಾನಿಸಲು ಇಂದಿನಿಂದ ನವದೆಹಲಿ ಪ್ರವಾಸ ಆರಂಭಿಸಿದ್ದು, ಸಿಂಗಾಪುರ್ ಹೈ ಕಮಿಷನರ್ ಸೈಮನ್ ವಾಂಗ್ ವೈ ಕುಯೆನ್ ಅವರನ್ನು ಭೇಟಿಮಾಡಿ ಮಾತುಕತೆ ನಡೆಸಿದರು, ಈ ಸಂದರ್ಭದಲ್ಲಿ ಸೆಮಿಕಂಡಕ್ಟರ್‌ಗಳು, ಡಿಜಿಟಲ್ ತಂತ್ರಜ್ಞಾನ, ಆರೋಗ್ಯ ಮತ್ತು ವೈದ್ಯಕೀಯ ಸಂಶೋಧನೆ, ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಕ್ಷೇತ್ರಗಳಲ್ಲಿನ ಸಹಕಾರವನ್ನು ಉತ್ತೇಜಿಸುವ ಉದ್ದೇಶದಿಂದ ಭಾರತ ಮತ್ತು ಸಿಂಗಾಪುರದ ನಡುವಿನ ಇತ್ತೀಚಿನ ಒಪ್ಪಂದದ ಬಗೆಗೂ ಚರ್ಚಿಸಿದೆವು ಎಂದಿದ್ದಾರೆ.

Previous articleವೈದ್ಯರ ಮೇಲೆ ಹಲ್ಲೆ ಖಂಡಿಸಿ ಓಪಿಡಿ ಬಂದ್‌
Next articleಬೆಂಗಳೂರು ಭಾರತದ ಸಿಲಿಕಾನ್ ವ್ಯಾಲಿ