ರಾಜೀನಾಮೆ ಕೇಳೋದು ಬಿಟ್ಟು ರಾಜ್ಯಕ್ಕೆ ಬರಬೇಕಾದ ಅನುದಾನ ತನ್ನಿ

0
33

ಯಾರ ಯಾರ ಮೇಲೆ ಎಫ್‌ಐಆರ್ ಆಗಿದೆಯೋ ಎಲ್ಲರೂ ರಾಜೀನಾಮೆ ಕೊಡಿ. ವಿಧಾನಸೌಧದ ಮುಂದೆ ಸಾಲಾಗಿ ಬಂದು ರಾಜೀನಾಮೆ ಕೊಡಿ, ಕೊಡ್ತೀರಾ?

ಮೈಸೂರು: ರಾಜೀನಾಮೆ ಕೊಡಿ ರಾಜೀನಾಮೆ ಕೊಡಿ ಅಂದರೆ ಕೊಡುವುದಕ್ಕೆ ಆಗುತ್ತಾ? ಶಾಸಕ ಜಿ.ಟಿ ದೇವೇಗೌಡ ಹೇಳಿದ್ದಾರೆ.
ನಗರದಲ್ಲಿ ದಸರಾ ಉದ್ಘಾಟನೆ ಸಮಾರಂಭದಲ್ಲಿ ಮಾತನಾಡಿದ ಅವರು ಎಲ್ಲಾ ಗಾಜಿನ ಮನೆಯಲ್ಲಿ ಕೂತಿದ್ದಾರೆ. ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡಲು ನ್ಯಾಯಾಲಯ ಹೇಳಿದೆಯಾ ? ಕೇಂದ್ರದಲ್ಲಿ ಮಂತ್ರಿ ಆದವರಿಗೆ ಜವಾಬ್ದಾರಿ ಬೇಡವಾ? ಕುಮಾರಸ್ವಾಮಿಗೆ ರಾಜೀನಾಮೆ ಕೊಡು ಅಂದರೆ ಕೊಡುತ್ತಾರಾ? ತಾಕತ್ತಿದ್ದರೆ ಎಲ್ಲರೂ ಬನ್ನಿ. ಯಾರ ಯಾರ ಮೇಲೆ ಎಫ್‌ಐಆರ್ ಆಗಿದೆಯೋ ಎಲ್ಲರೂ ರಾಜೀನಾಮೆ ಕೊಡಿ. ವಿಧಾನಸೌಧದ ಮುಂದೆ ಸಾಲಾಗಿ ಬಂದು ರಾಜೀನಾಮೆ ಕೊಡಿ, ಕೊಡ್ತೀರಾ? ರಾಜೀನಾಮೆ ಕೊಡಬೇಕಂತೆ ರಾಜೀನಾಮೆ. ಮಾಡೋಕೆ ಬೇರೆ ಕೆಲಸ ಇಲ್ವ? ಏನು ಅಭಿವೃದ್ಧಿ ಕಾರ್ಯ ಆಗಬೇಕೋ ಅದನ್ನು ನೋಡಿ. ಕೇಂದ್ರದಿಂದ ಏನು ತರಬೇಕು, ರಾಜ್ಯದಿಂದ ಏನು ಹೋಗಬೇಕು ಅನ್ನೋದು ನೋಡಿ ಎಂದರು.

Previous articleರಂಗು ರಂಗಿನ ಮಾತಿನ ಮೂಲಕ ಜನರ ಹೊಟ್ಟೆ ತುಂಬಿಸಲು ಸಾಧ್ಯವಿಲ್ಲ
Next article150 ಎಕರೆ ಪ್ರದೇಶದಲ್ಲಿ ಮೈಸೂರು ಫಿಲಂ ಸಿಟಿ ನಿರ್ಮಾಣ