ರಾಜೀನಾಮೆ ಕೊಟ್ಟು ಸಿಡಿದೆದ್ದ ಸೈನಿಕ

0
50

ಹುಬ್ಬಳ್ಳಿ: ಸಿ.ಪಿ. ಯೋಗೇಶ್ವರ್ ತಮ್ಮ MLC ಸ್ಥಾನಕ್ಕೆ ಯೋಗೇಶ್ವರ್ ರಾಜೀನಾಮೆ ನೀಡಿದ್ದಾರೆ.
ರಾಮನಗರ ಜಿಲ್ಲೆಯ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಅವರು, ಇಂದು ಮಧ್ಯಾಹ್ನ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಭೇಟಿಯಾಗಿ ವಿಧಾನ ಪರಿಷತ್ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಇನ್ನು ಬಸವರಾಜ ಹೊರಟ್ಟಿ ಅವರು ರಾಜೀನಾಮೆ ಅಂಗೀಕರಿಸಿದ್ದಾರೆ. ರಾಜೀನಾಮೆ ಬಳಿಕ ಹೊರಟ್ಟಿ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಪಿ ಯೋಗೇಶ್ವರ್ ಅವರು, ನಾನು ಯಾವುದೇ ಪಕ್ಷ ಸೇರವುದಿಲ್ಲ. ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿದ್ದೇನೆ ಎಂದು ಹೇಳಿದ್ದಾರೆ.

Previous articleರೈಲ್ವೆ ಹಳಿ ಮೇಲೆ ಕಲ್ಲು ಇಟ್ಟಿದ್ದು ದೇಶದ್ರೋಹದ ಕೃತ್ಯ
Next article“ಯಾಕೆ” ಚಿತ್ರದ ಶೀರ್ಷಿಕೆ ಅನಾವರಣ: ನವಂಬರ್‌ನಲ್ಲಿ ಚಿತ್ರೀಕರಣ ಆರಂಭ