ಬೆಂಗಳೂರು : ಬಿಜೆಪಿ ವಿಧಾನಪರಿಷತ್ ಸದಸ್ಯರಾದ ಸಿ.ಪಿ.ಯೋಗೇಶ್ವರ್ ಅವರು ವಿಧಾನ ಪರಿಷತ್ ಸ್ಥಾನಕ್ಕೆ ಇಂದು ರಾಜೀನಾಮೆ ಸಲ್ಲಿಸಲಿದ್ದಾರೆ ಎಂದು ತಿಳಿದುಬಂದಿದೆ.
ಇಂದು ನಾಲ್ಕು ಗಂಟೆಗೆ ಹುಬ್ಬಳ್ಳಿಯಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಭೇಟಿ ಮಾಡಿ ತಮ್ಮ ರಾಜೀನಾಮೆ ಪತ್ರವನ್ನು ನೀಡಲಿದ್ದಾರೆ.