Home ತಾಜಾ ಸುದ್ದಿ ರಾಜ್ಯಕ್ಕೆ ಕುಮಾರಸ್ವಾಮಿ: ಸ್ವಾಗತಕ್ಕೆ ಭರದ ಸಿದ್ಧತೆ

ರಾಜ್ಯಕ್ಕೆ ಕುಮಾರಸ್ವಾಮಿ: ಸ್ವಾಗತಕ್ಕೆ ಭರದ ಸಿದ್ಧತೆ

0

ಬೆಂಗಳೂರು: ಕೇಂದ್ರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾಗಿ ಅಧಿಕಾರ ವಹಿಸಿಕೊಂಡ ಮೇಲೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮೊದಲ ಬಾರಿಗೆ ಶುಕ್ರವಾರ ರಾಜ್ಯಕ್ಕೆ ಆಗಮಿಸಲಿದ್ದಾರೆ.
ಶುಕ್ರವಾರ ಬೆಳಗ್ಗೆ ೧೧.೫೦ಕ್ಕೆ ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಬೆಂಗಳೂರಿನ ನಾಡಪ್ರಭು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿದ್ದು ಎಚ್ಡಿಕೆ ಸ್ವಾಗತಕ್ಕೆ ಜೆಡಿಎಸ್ ಕಾರ್ಯಕರ್ತರು ಭರದ ಸಿದ್ಧತೆ ಮಾಡಿಕೊಂಡಿದ್ದಾರೆ.
ವಿಮಾನನಿಲ್ದಾಣದಿಂದ ನೇರವಾಗಿ ಜೆಡಿಎಸ್ ಕೇಂದ್ರ ಕಚೇರಿ ಜೆ.ಪಿ.ಭವನಕ್ಕೆ ತೆರಳಲಿರುವ ಕುಮಾರಸ್ವಾಮಿ ಅವರು ಪಕ್ಷದ ಕಾರ್ಯಕರ್ತರೊಡನೆ ಕೆಲ ಕಾಲ ಕಳೆದ ಬಳಿಕ ರಾಜ್ಯಭವನಕ್ಕೆ ತೆರಳಿ ರಾಜ್ಯಪಾಲರನ್ನು ಭೇಟಿ ಮಾಡಲಿದ್ದಾರೆ. ಆನಂತರ ಪದ್ಮನಾಭನಗರದ ಸೋದರಿ ನಿವಾಸಕ್ಕೆ ತೆರಳಿ ಮಾಜಿ ಪ್ರಧಾನಿ ದೇವೇಗೌಡರು ಮತ್ತು ತಾಯಿಯ ಆಶೀರ್ವಾದ ಪಡೆಯಲಿದ್ದಾರೆ ಎಂದು ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದ್ದಾರೆ.

Exit mobile version