Home ನಮ್ಮ ಜಿಲ್ಲೆ ಕೊಪ್ಪಳ ರಾಜ್ಯಕ್ಕೆ ಬರಬೇಕಾದ ತೆರಿಗೆ ಹಣ ಕೊಡಿಸಿ

ರಾಜ್ಯಕ್ಕೆ ಬರಬೇಕಾದ ತೆರಿಗೆ ಹಣ ಕೊಡಿಸಿ

0

ಕುಷ್ಟಗಿ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಯವರ ತಾಟಿನಲ್ಲಿ ದೊಡ್ಡ ಹೆಗ್ಗಣ ಬಿದ್ದಿದೆ. ಬೇರೆಯವರ ತಾಟಿನಲ್ಲಿ ನೊಣ ಹುಡುಕುವುದನ್ನು ಬಿಟ್ಟು ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರಬೇಕಾದ ತೆರಿಗೆ ಹಣ ಕೊಡಿಸಿದರೆ ಸಾಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗಟ್ಟಿಯಾಗಿ ಇದ್ದಾರೆ. ಸರ್ಕಾರದಲ್ಲಿ ಯಾವುದೇ ರೀತಿ ಹಣದ ಕೊರತೆ ಇಲ್ಲ. ಕಾಂಗ್ರೆಸ್ ಸರ್ಕಾರದ ಬಸ್ಸಿನಲ್ಲಿ ಡೀಸೆಲ್ ಖಾಲಿಯಾಗಿಲ್ಲ, ಬಸ್ ಸಹ ನಿಂತಿಲ್ಲ. ನಮ್ಮ ಹತ್ತಿರ ಡೀಸೆಲ್ ಫುಲ್ ಇದೆ. ಬಿಜೆಪಿಯವರ ಬಸ್‌ನಲ್ಲಿ ಡೀಸೆಲ್ ಇಲ್ಲದೆ ನಿಂತು ಹೋಗಿದೆ ಎಂದು ಲೇವಡಿ ಮಾಡಿದರು.
ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರದಿಂದ ವಿದೇಶದಲ್ಲಿರುವ ಪ್ರಜ್ವಲ್ ರೇವಣ್ಣ ಅವರನ್ನು ಕರೆದುಕೊಂಡು ಬರಲು ಆಗುತ್ತಿಲ್ಲ. ಪ್ರಜ್ವಲ್ ಅವರನ್ನು ರಾಜ್ಯಕ್ಕೆ ಕರೆತರಲು ಕೇಂದ್ರಕ್ಕೆ ಸಿಎಂ ಎರಡು ಬಾರಿ ಪತ್ರ ಬರೆದಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದರು.

Exit mobile version