ರಾಜ್ಯದಲ್ಲಿ ಇರೋದು ಬರೀ ಗ್ಯಾರಂಟಿ ಅಲೆ ಮಾತ್ರ

0
6

ಹುಬ್ಬಳ್ಳಿ: ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿನೋದ ಅಸೂಟಿ ಪರ ಭರ್ಜರಿ ಪ್ರಚಾರ ನಡೆಸಿ ವಿರೋಧ ಪಕ್ಷಗಳ ವಿರುದ್ಧ ಗುಡುಗಿದರು.
ಶಿಗ್ಗಾವಿ ತಾಲೂಕಿನ ತಡಸ ಗ್ರಾಮದಲ್ಲಿ ಪ್ರಜಾಧ್ವನಿ-೨ ಸಮಾವೇಶದಲ್ಲಿ ಅಪಾರ ಜನಸ್ತೋಮವನ್ನು ಉದ್ದೇಶಿಸಿ ಮಾತನಾಡಿದ ಅವರು, ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಬದಲಾವಣೆ ಗಾಳಿ ಬೀಸುತ್ತಿದೆ. ದೇಶದಲ್ಲಿ ರಾಜ್ಯದಲ್ಲಿ ಮೋದಿ ಅಲೆ ಇಲ್ಲ. ಗ್ಯಾರಂಟಿ ಅಲೆ ಇದೆ ಎಂದರು.
ಬರಗಾಲ ಬಂದಾಗಲೂ ಅನುದಾನ ಕೊಡದ ಕೇಂದ್ರ ಸರ್ಕಾರವನ್ನು ಪ್ರಶ್ನಿಸದ, ರಾಜ್ಯದ ಜನರ ಪರವಾಗಿ ನೆಪಕ್ಕೂ ಮಾತನಾಡದ ಪ್ರಹ್ಲಾದ ಜೋಶಿಯಿಂದ ನಿಮ್ಮ ಮತಕ್ಕೆ ಗೌರವ ಬಂದಿದೆಯಾ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದರು.
ರಾಜ್ಯದಲ್ಲಿ ಇಷ್ಟು ಭೀಕರ ಬರಗಾಲ ಇದ್ದರೂ ಕೇಂದ್ರ ಸರ್ಕಾರ ಕರ್ನಾಟಕ ರಾಜ್ಯದ ಪಾಲಿನ ಒಂದೇ ಒಂದು ರೂಪಾಯಿ ಬರ ಪರಿಹಾರವನ್ನು ಬಿಡುಗಡೆ ಮಾಡಲಿಲ್ಲ. ನಾವು ಸುಪ್ರೀಂ ಕೋರ್ಟ್‌ಗೆ ಹೋದ ಮೇಲೆ ಅವರ ಆದೇಶದಂತೆ ಪರಿಹಾರ ಕೊಡುವುದಾಗಿ ಹೇಳಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

Previous articleನೇಹಾ ಪೋಷಕರಿಗೆ ಧೈರ್ಯ ತುಂಬಿದ ಸಿಎಂ
Next articleಮಹಿಳೆಯರು ಸುರಕ್ಷಿತವಾಗಿ ಮನೆಗೆ ಬರಬೇಕೆಂದರೆ ಬಿಜೆಪಿಗೆ ಮತ ಹಾಕಿ