ರಾಜ್ಯದಲ್ಲಿ ಕಾನೂನು, ಸುವ್ಯವಸ್ಥೆ ಹದಗೆಟ್ಟಿದೆ

0
22

ಬೆಂಗಳೂರು: ರಾಜ್ಯದಲ್ಲಿ ಕಾನೂನು, ಸುವ್ಯವಸ್ಥೆ ಹದಗೆಟ್ಟಿದ್ದು ಈ ಕೂಡಲೇ ರಾಜ್ಯ ಸರ್ಕಾರ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಆಗ್ರಹಿಸಿದ್ದಾರೆ.
ಹುಬ್ಬಳ್ಳಿಯ ವೀರಾಪುರ ಓಣಿಯ ಕುಮಾರಿ ಅಂಜಲಿ ಅಂಬಿಗೇರ ಅವರ ಕೊಲೆಯಾದ ಹಿನ್ನೆಲೆಯಲ್ಲಿ ಅವರ ಮನೆಗೆ ಭೇಟಿ ನೀಡಿರುವ ಅವರು ಕುಟುಂಬದ ಸದಸ್ಯರಿಗೆ ಸಾಂತ್ವನ ತಿಳಿಸಿ, ಯಾವುದೇ ಕಾರಣಕ್ಕೂ ಎದೆಗುಂದದಂತೆ ಧೈರ್ಯ ತುಂಬಿದ್ದು ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದು ರಾಜ್ಯದಲ್ಲಿ ಕಾನೂನು, ಸುವ್ಯವಸ್ಥೆ ಹದಗೆಟ್ಟಿದ್ದು ಈ ಕೂಡಲೇ ರಾಜ್ಯ ಸರ್ಕಾರ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಬೇಕು. ಇಂತಹ ಘಟನೆಗಳು ಮರುಕಳಿಸಿದಂತೆ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರವನ್ನು ಆಗ್ರಹಿಸುತ್ತೇನೆ ಎಂದಿದ್ದಾರೆ.

Previous articleTwitter ಈಗ ಅಧಿಕೃತವಾಗಿ X
Next articleಬಸ್ ಕಿಟಕಿಯಿಂದ ಉಗುಳಲೂ ಹೋಗಿ ಮಹಿಳೆಯ ತಲೆ ಲಾಕ್