ರಾಜ್ಯದಲ್ಲಿ ಬಿಜೆಪಿ ಪ್ರತಿಭಟನೆ

0
11

ಬೆಂಗಳೂರು: ಅತ್ತ ದೆಹಲಿಯ ಜಂತರ್ ಮಂತರ್‌ನಲ್ಲಿ ಕೇಂದ್ರ ಸರಕಾರದ ವಿರುದ್ಧ ರಾಜ್ಯ ಕಾಂಗ್ರೆಸ್ ಸರಕಾರ ಧರಣಿ ನಡೆಸಿದರೆ, ಇತ್ತ ಬೆಂಗಳೂರಿನಲ್ಲಿ ಬಿಜೆಪಿ ನಾಯಕರು ರಾಜ್ಯ ಸರಕಾರದ ವಿರುದ್ಧ ಧರಣಿ ನಡೆಸಿದರು.
ಗಾಂಧಿ ಪ್ರತಿಮೆ ಎದುರು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ಶಾಸಕರು ಬುಧವಾರ ಬೆಳಗ್ಗೆ ಧರಣಿ ನಡೆಸಿದರು. ನಂತರ ಕೈಯಲ್ಲಿ ದೊಡ್ಡ ಗಾತ್ರದ ಕೀಲಿಕೈ ಹಿಡಿದುಕೊಂಡು ಮೂರನೇ ಮಹಡಿಯಲ್ಲಿರುವ ಸಿಎಂ ಸಿದ್ದರಾಮಯ್ಯ ಕಚೇರಿಗೆ ಬೀಗ ಹಾಕಲು ತೆರಳಲು ಮುಂದಾದರು. ಇದಕ್ಕೆ ಅವಕಾಶ ನೀಡದ ಪೊಲೀಸರು ವಶಕ್ಕೆ ಪಡೆದರು. ನಂತರ ಹೈಗ್ರೌಂಡ್ ಪೊಲೀಸ್ ಠಾಣೆಗೆ ಕರೆದೊಯ್ದು ಬಿಡುಗಡೆಗೊಳಿಸಿದರು.
ಈ ವೇಳೆ ಸಿದ್ದರಾಮಯ್ಯ ಸರಕಾರಕ್ಕೆ ಧಿಕ್ಕಾರ, ಭ್ರಷ್ಟ ಕಾಂಗ್ರೆಸ್ ಸರಕಾರಕ್ಕೆ ಧಿಕ್ಕಾರ, ರೈತ ವಿರೋಧಿ ಕಾಂಗ್ರೆಸ್ ಸರಕಾರಕ್ಕೆ ಧಿಕ್ಕಾರ, ರಾಜ್ಯದ ರೈತರನ್ನು ಕಣ್ಣೀರು ಹಾಕಿಸುವ ಕಾಂಗ್ರೆಸ್ ಸರಕಾರಕ್ಕೆ ಧಿಕ್ಕಾರ ಎಂದು ಬಿಜೆಪಿ ಶಾಸಕರು ಕೂಗಿದರು.

Previous articleರಾಡ್‌ನಿಂದ ಹೊಡೆದು ವ್ಯಕ್ತಿಯ ಕೊಲೆ
Next articleಅನುದಾನ ಕದನ: ದೆಹಲಿಯಲ್ಲಿ ಸಂಚಲನ