ರಾಜ್ಯದಲ್ಲಿ ಹೆಚ್ಚಿನ ಭದ್ರತೆ: ಪೊಲೀಸರ ಹೆಚ್ಚುವರಿ ರಜೆ ರದ್ದು

0
17

ಬೆಂಗಳೂರು : ಕೇಂದ್ರ ಸರಕಾರ ಪ್ರತಿಯೊಂದು ರಾಜ್ಯ ಸರಕಾರಗಳಿಗೆ ಕೆಲವು ಸೂಚನೆಗಳನ್ನು ನೀಡಿದೆ. ಅದರ ಹಿನ್ನೆಲೆಯಲ್ಲಿ ಈಗಾಗಲೇ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದ್ದೇವೆ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಹೇಳಿದ್ದಾರೆ‌.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ರಾಜ್ಯದ ಸೂಕ್ಷ್ಮ‌ ಪ್ರದೇಶಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭದ್ರತಾ ಸಿಬ್ಬಂದಿಗಳನ್ನು ನಿಯೋಜಿಸುವ ಮೂಲಕ ಸುರಕ್ಷತೆ ಕೈಗೊಂಡಿದ್ದೇವೆ, ಯುದ್ಧ ಭೀತಿ ಇದೆ. ಗಡಿ ಪ್ರದೇಶದಲ್ಲಿ ಆಗುತ್ತಿರುವ ಚಟುವಟಿಕೆಗಳು, ಉಗ್ರರ ವಿರುದ್ಧ ಸೇನಾ ಪಡೆ ಕ್ರಮ ತೆಗೆದುಕೊಂಡಿದೆ. ಈ ಪರಿಸ್ಥಿತಿ ಹೆಚ್ಚಾದರೆ ಯುದ್ದದ ಪರಿಸ್ಥಿತಿ ಬರಬಹುದು ಎಂಬುದನ್ನು ಕೇಂದ್ರ ಸರಕಾರ ಪ್ರತಿಯೊಂದು ರಾಜ್ಯ ಸರಕಾರಗಳಿಗೆ ಕೆಲವು ಸೂಚನೆಗಳನ್ನು ನೀಡಿದೆ. ಅದರ ಹಿನ್ನೆಲೆಯಲ್ಲಿ ಈಗಾಗಲೇ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದ್ದೇವೆ ಎಂದರು‌.

ಸದ್ಯಕ್ಕೆ ಯಾವುದೇ ರಜೆ ಇಲ್ಲ : ಸೂಕ್ಷ್ಮ‌ ಸನ್ನಿವೇಶ ಇರುವುದರಿಂದ ಪೊಲೀಸರಿಗೆ ರಜೆ ಮಂಜೂರು ಮಾಡುವುದಕ್ಕೆ ಹೋಗುವುದಿಲ್ಲ. ಸದ್ಯಕ್ಕೆ ಯಾವುದೇ ರಜೆ ಇಲ್ಲ. ಪೊಲೀಸರಿಗೆ ರಜೆ ಕೊಡುವುದಿಲ್ಲ. ಪರಿಸ್ಥಿತಿ ಸಾಮಾನ್ಯಕ್ಕೆ ಬಂದಿರುವುದನ್ನು ಕೇಂದ್ರ ಸರಕಾರ ನಮಗೆ ತಿಳಿಸುತ್ತದೆ. ನಾವು ಈಗ ಸೂಕ್ಷ್ಮವಾಗಿರಬೇಕು, ಅಲ್ಲಿಯವರೆಗೂ ಪೊಲೀಸರಿಗೆ ರಜೆ ಕೊಡುವುದಿಲ್ಲ ಎಂದರು.

Previous articleಪಾಕಿಸ್ತಾನದ 5 ವಾಯುನೆಲೆ, 2 ರಾಡಾರ್ ಬೇಸ್ ಧ್ವಂಸ
Next article24 ವಿಮಾನ ನಿಲ್ದಾಣಗಳಲ್ಲಿ ಮೇ 15ರವರೆಗೆ ನಾಗರಿಕ ವಿಮಾನ ಹಾರಾಟ ಬಂದ್