ಬೆಂಗಳೂರು : ನಗರದ ಪ್ರಪ್ರಥಮ ಡಬಲ್ ಡೆಕ್ಕರ್ ಫ್ಲೈ ಓವರ್‌ನಲ್ಲಿ ಇಂದು ಟ್ರಯಲ್ ರನ್ ನಡೆಯಲಿದೆ.
ಊಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಇಂದು ಮಧ್ಯಾಹ್ನ 3 ಗಂಟೆಗೆ ಪ್ರಾಯೋಗಿಕ ಸಂಚಾರಕ್ಕೆ ಹಸಿರು ನಿಶಾನೆ ತೋರಿಸಲಿದ್ದಾರೆ. ಡಬಲ್ ಡೆಕ್ಕರ್ ಫ್ಲೈ ಓವರ್ 3.36 ಕಿಲೋ ಮೀಟರ್ ಉದ್ದವಿದ್ದು, ರಾಗಿಗುಡ್ಡ- ಸಿಲ್ಕ್ ಬೋರ್ಡ್ ಜಂಕ್ಷನ್‌ವರೆಗೆ ನಿರ್ಮಾಣವಾದ ಈ ರಸ್ತೆ 449 ಕೋಟಿ ವೆಚ್ಚದಲ್ಲಿ ನಿರ್ಮಾಣ ಆಗಿದೆ.