ರಾಜ್ಯದ 10 ಜಿಲ್ಲೆಗಳಿಗೆ ನೂತನ ಅಧ್ಯಕ್ಷರ ನೇಮಕ

0
35

ಬೆಂಗಳೂರು: ಬಿಜೆಪಿಯ 10 ಜಿಲ್ಲೆಗಳಿಗೆ ಜಿಲ್ಲಾ ಘಟಕಗಳಿಗೆ ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ ಎಂದು ರಾಜ್ಯ ಚುನಾವಣಾಧಿಕಾರಿ ಕ್ಯಾ.ಗಣೇಶ್ ಕಾರ್ಣಿಕ್ ತಿಳಿಸಿದ್ದಾರೆ.
ಈ ಕುರಿತಂತೆ ಪ್ರಕಟಣೆ ನೀಡಿದ್ದು ರಾಜ್ಯದಲ್ಲಿ ಬಾಕಿ ಉಳಿದಿದ್ದ 10 ಜಿಲ್ಲೆಗಳಿಗೆ ನೂತನ ಅಧ್ಯಕ್ಷರನ್ನು ರಾಜ್ಯ ಬಿಜೆಪಿ ನೇಮಕ ಮಾಡಿದೆ. ದೇಶದಾದ್ಯಂತ ಪಕ್ಷದ ಸಂಘಟನಾ ಪರ್ವ 2024-25 ನಡೆಯುತ್ತಿದ್ದು, ಇದರ ಅಂಗವಾಗಿ ರಾಜ್ಯದಲ್ಲಿ ಎರಡನೇ ಹಂತದಲ್ಲಿ ಉಳಿದಿರುವ 10 ಸಂಘಟನಾತ್ಮಕ ಜಿಲ್ಲಾ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಯನ್ನು ಮುಗಿಸಲಾಗಿದೆ. ರಾಜ್ಯ ಚುನಾವಣಾಧಿಕಾರಿಯಾದ ನಾನು ಈ ಕೆಳಕಂಡ ಜಿಲ್ಲಾ ಅಧ್ಯಕ್ಷರನ್ನು ಅಭಿನಂದಿಸುತ್ತಾ, ಈ ಹೊಣೆಗಾರಿಕೆಯನ್ನು ಅತ್ಯಂತ ಜವಾಬ್ದಾರಿಯುತವಾಗಿ ನಿರ್ವಹಿಸುತ್ತಾ, ಪಕ್ಷದ ಸಂಘಟನೆಯನ್ನು ತಳಮಟ್ಟದಲ್ಲಿ ಸದೃಢಗೊಳಿಸುತ್ತಾ, ಮುಂಬರುವ ಎಲ್ಲ ರೀತಿಯ ಸವಾಲುಗಳನ್ನು ಎದುರಿಸಲು ಶಕ್ತಿ ತುಂಬುತ್ತಾ ಪಕ್ಷದ ವರ್ಚಸ್ಸನ್ನು ಹೆಚ್ಚಿಸುವಲ್ಲಿ ಸತತ ಶ್ರಮಿಸುವಿರೆಂದು ಆಶಿಸುತ್ತೇನೆ ಎಂದಿದ್ದಾರೆ.

Previous articleಮಾವು ನಿಷೇಧ ಹಿಂಪಡೆಯುವಂತೆ ಆಂಧ್ರ ಸಿಎಂಗೆ ಸಿದ್ದರಾಮಯ್ಯ ಪತ್ರ
Next articleನೀರಿನಲ್ಲಿ ಕೊಚ್ಚಿ ಹೋದ ವ್ಯಕ್ತಿ: ಮುಂದುವರೆದ ಶೋಧ ಕಾರ್ಯ