ರಾಜ್ಯದ 9 ಜಿಲ್ಲೆಗಳಿಗೆ ಯಲ್ಲೋ ಅಲರ್ಟ್

0
33

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜ್ಯದ 9 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯಲ್ಲೋ ಅಲರ್ಟ್ ಘೋಷಿಸಿದೆ.
ಬೆಂಗಳೂರು ನಗರ ಸೇರಿದಂತೆ ಬೆಂಗಳೂರು ಗ್ರಾಮಾಂತರ, ತುಮಕೂರು, ಚಿತ್ರದುರ್ಗ, ರಾಮನಗರ, ಕೊಡಗು, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.
ದಕ್ಷಿಣ ಒಳನಾಡಿನ ಜಿಲ್ಲೆಗಳ ಅನೇಕ ಕಡೆ ಸಾಧಾರಣ ಮಳೆಯಾಗುವ ಸಾಧೆತೆಯಿದ್ದು, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಒಂದೆರಡು ಕಡೆ ಮಳೆಯಾಗಲಿದೆ ಮತ್ತು ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರಿಯಲಿದೆ ಎಂದು ವರದಿ ಮಾಡಿದೆ.

Previous articleಕಾನೂನು ಕೈಗೆತ್ತಿಕೊಂಡಾಗ ಲಾಠಿ ಚಾರ್ಜ್ ಅನಿವಾರ್ಯ
Next articleಡಿಜಿಟಲ್ ಅರೆಸ್ಟ್ ವಂಚನೆ ಪ್ರಕರಣ: 11ಸಾವಿರ ಪ್ರಕರಣ ದಾಖಲು