ರಾಜ್ಯಪಾಲರ ಅನುಮತಿ ಪ್ರಶ್ನಿಸಿ ಹೈಕೋರ್ಟ್ ಮೊರೆ ಹೋಗಲಿರುವ ಸಿಎಂ ಸಿದ್ದರಾಮಯ್ಯ

0
10

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ತನಿಖೆಗೆ ಅಭಿಯೋಜನಾ ಮಂಜೂರಾತಿ ನೀಡಿರುವ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರ ಕ್ರಮ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್‌ ಇಂದು ಮಧ್ಯಾಹ್ನ 2.30ಕ್ಕೆ ವಿಚಾರಣೆ ನಡೆಸಲಿದೆ.


ಸಿಎಂ ಪರ ವಕಾಲತ್ತು ವಹಿಸಲು ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಮತ್ತು ಕಬಿಲ್ ಸಿಬಲ್ ನವದೆಹಲಿಯಿಂದ ರಾಜ್ಯ ರಾಜಧಾನಿ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸುವ ಹಿನ್ನೆಲೆಯಲ್ಲಿ ಸೋಮವಾರ ಮಂತ್ರಾಲಯದ ಗುರು ರಾಘವೇಂದ್ರ ದೇಗುಲಕ್ಕೆ ಭೇಟಿ ನೀಡಬೇಕಿದ್ದ ಸಿದ್ದರಾಮಯ್ಯ, ಈ ಭೇಟಿಯನ್ನು ರದ್ದುಗೊಳಿಸಿದ್ದಾರೆಂದು ತಿಳಿದುಬಂದಿದೆ.

Previous articleಮಂತ್ರಾಲಯದ ಶ್ರೀರಾಯರ ಆರಾಧನಾ ಮಹೋತ್ಸವ
Next articleಬರದ ನಾಡಿನ ಭಾಗ್ಯದೇವತೆ ಕೃಷ್ಣೆ