Home ಕ್ರೀಡೆ ರಾಜ್ಯಮಟ್ಟದ ಕಬಡ್ಡಿ ಆಟಗಾರ ಪ್ರೀತಮ್ ಶೆಟ್ಟಿ ನಿಧನ

ರಾಜ್ಯಮಟ್ಟದ ಕಬಡ್ಡಿ ಆಟಗಾರ ಪ್ರೀತಮ್ ಶೆಟ್ಟಿ ನಿಧನ

0

ಶುಕ್ರವಾರ ಮಂಡ್ಯದಲ್ಲಿ ಕಬಡ್ಡಿ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದರು

ಕಾರ್ಕಳ : ರಾಜ್ಯಮಟ್ಟದ ಕಬಡ್ಡಿ ಆಟಗಾರ ಪ್ರೀತಂ ಶೆಟ್ಟಿ(26) ಹೃದಯಾಘಾತದಿಂದ ನಿಧನರಾಗಿದ್ದಾರೆ.
ಮುಟ್ಲುಪಾಡಿ‌ ನಡುಮನೆ ನಿವಾಸಿ ಪ್ರೀತಂ‌ ಅವರು ಶುಕ್ರವಾರ ಮಂಡ್ಯದಲ್ಲಿ ಕಬಡ್ಡಿ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದರು. ಈ ವೇಳೆ ಆಟವಾಡುತ್ತಿರುವಾಗ‌ಲೇ ಅವರಿಗೆ ಎದೆ ನೋವು ಕಾಣಿಸಿಕೊಂಡಿದೆ ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು, ಆದರೆ ಅಷ್ಟರಲ್ಲೆ ಹೃದಯಘಾತದಿಂದ ಮೃತಪಟ್ಟಿದ್ದಾರೆ. ತಾಯಿ ಮತ್ತು ಓರ್ವ ಸಹೋದರನನ್ನು ಅಗಲಿದ್ದಾರೆ.

Exit mobile version