Home ನಮ್ಮ ಜಿಲ್ಲೆ ರಾಜ್ಯವನ್ನು 20 ವರ್ಷಗಳಷ್ಟು ಹಿಂದಕ್ಕೆ ತಳ್ಳಿದ್ದಾರೆ

ರಾಜ್ಯವನ್ನು 20 ವರ್ಷಗಳಷ್ಟು ಹಿಂದಕ್ಕೆ ತಳ್ಳಿದ್ದಾರೆ

0

ಬೆಂಗಳೂರು: ಸುಳ್ಳುಗಳನ್ನೇ ತುಂಬಿಸಿರುವ ರೈತ ವಿರೋಧಿ ಜನ ವಿರೋಧಿ ಬೋಗಸ್ ಬಜೆಟ್ ಇದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇಂದು ಮಂಡಿಸಿದ ಬಜೆಟ್ ರೈತವಿರೋಧಿ, ರಾಜ್ಯದ ಅಭಿವೃದ್ಧಿ ದೃಷ್ಟಿಯಿಂದ ಪ್ರಗತಿ ಶೂನ್ಯ ಬಜೆಟ್ ಅನ್ನು ಖಂಡಿಸಿ ಸದನ ಬಹಿಷ್ಕರಿಸಿ, ವಿಧಾನ ಸೌಧದ ಎದುರು ನಮ್ಮ ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ಶಾಸಕರೊಂದಿಗೆ ಪ್ರತಿಭಟನೆ ನಡೆಸಲಾಯಿತು.

ಯುವಕರಿಗೆ ಯಾವುದೇ ಕಾರ್ಯಕ್ರಮಗಳನ್ನು, ಯೋಜನೆಗಳನ್ನು ಘೋಷಿಸದೇ, ಅಭಿವೃದ್ಧಿಯಲ್ಲಿ ರಾಜ್ಯವನ್ನು 20 ವರ್ಷಗಳಷ್ಟು ಹಿಂದಕ್ಕೆ ತಳ್ಳಿದ್ದಾರೆ. ಉತ್ತರ ಕರ್ನಾಟಕದ ಅಭಿವೃದ್ಧಿಗೆ ಬಿಡಿಗಾಸು ನೀಡದೇ, ಬರಗಾಲದಿಂದ ನೊಂದು ತೀವ್ರ ಸಂಕಷ್ಟದಲ್ಲಿರುವ ರೈತರನ್ನು ನಿರ್ಲಕ್ಷಿಸಿ, ಬಡವರು, ದೀನದಲಿತರು, ನೇಕಾರರು, ಪರಿಶಿಷ್ಟ ಹಾಗೂ ಹಿಂದುಳಿದ ವರ್ಗಗಳಿಗೂ ನಿರಾಸೆ ಮೂಡಿಸಿದ ಸರ್ಕಾರದ ಬಜೆಟ್ ಅನ್ನು ಖಂಡಿಸಿದ್ದಾರೆ.

Exit mobile version