Home ತಾಜಾ ಸುದ್ದಿ ರಾಜ್ಯಸಭಾ ಸ್ಥಾನಗಳಿಗೆ ಉಪಚುನಾವಣೆ ದಿನಾಂಕ ಪ್ರಕಟ

ರಾಜ್ಯಸಭಾ ಸ್ಥಾನಗಳಿಗೆ ಉಪಚುನಾವಣೆ ದಿನಾಂಕ ಪ್ರಕಟ

0

ನವದೆಹಲಿ: ರಾಜ್ಯಸಭೆಯ ಆರು ಸ್ಥಾನಗಳಿಗೆ ಕೇಂದ್ರ ಚುನಾವಣಾ ಆಯೋಗವು ಉಪಚುನಾವಣೆ ದಿನಾಂಕ ಪ್ರಕಟಿಸಿದೆ.
ರಾಜ್ಯಸಭಾ ಸ್ಥಾನಗಳಿಗೆ ಸದಸ್ಯರ ರಾಜೀನಾಮೆಯಿಂದ ತೆರವಾಗಿದ್ದ ಆಂಧ್ರಪ್ರದೇಶದ 3, ಒಡಿಶಾ, ಪಶ್ಚಿಮ ಬಂಗಾಳ ಹಾಗೂ ಹರಿಯಾಣದ ತಲಾ ಒಂದು ರಾಜ್ಯಸಭಾ ಸ್ಥಾನಗಳಿಗೆ ಡಿಸೆಂಬರ್ 20ರಂದು ಉಪಚುನಾವಣೆ ನಡೆಯಲಿದೆ. ಉಪಚುನಾವಣೆಯ ಸಂಬಂಧ ಡಿಸೆಂಬರ್ 3ರಂದು ಅಧಿಸೂಚನೆ ಪ್ರಕಟವಾಗಲಿದ್ದು, ಅಂದಿನಿಂದಲೇ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ. ಉಮೇದುವಾರಿಕೆ ಸಲ್ಲಿಸಲು ಡಿಸೆಂಬರ್ 10 ಕಡೆಯ ದಿನವಾಗಿದೆ. ಡಿಸೆಂಬರ್ 11 ರಂದು ನಾಮಪತ್ರಗಳ ಪರಿಶೀಲನೆ ಹಾಗೂ ನಾಮಪತ್ರ ವಾಪಸ್ ಪಡೆಯಲು ಡಿಸೆಂಬರ್ 13 ರಂದು ಅಂತಿಮ ದಿನವಾಗಿದೆ. ಡಿಸೆಂಬರ್ 20ರಂದು ಬೆಳಗ್ಗೆ 9ರಿಂದ ಸಂಜೆಯ 4ರವರೆಗೆ ಮತದಾನ ನಡೆಯಲಿದ್ದು, ಅಂದೇ ಮತ ಎಣಿಕೆ ನಡೆಯಲಿದೆ.

Exit mobile version