ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಅವರು ಮುಂದಿನ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯದ ಚುನಾವಣಾ ಉಸ್ತುವಾರಿಯಾಗಿ ರಾಧಾಮೋಹನ್ ದಾಸ್ ಅಗ್ರವಾಲ್ ಹಾಗೂ ಸಹ ಉಸ್ತುವಾರಿಯಾಗಿ ಸುಧಾಕರ್ ರೆಡ್ಡಿ ಅವರನ್ನು ನಿಯುಕ್ತಿಗೊಳಿಸಿ ಆದೇಶ ಹೊರಡಿಸಿದ್ದಾರೆ. ಒಟ್ಟು 23 ಮಂದಿಯನ್ನು ಉಸ್ತುವಾರಿ ಮತ್ತು ಸಹ ಉಸ್ತುವಾರಿಗಳನ್ನಾಗಿ ನೇಮಕ ಮಾಡಲಾಗಿದೆ. ಕರ್ನಾಟಕದ ಉಸ್ತುವಾರಿಯನ್ನಾಗಿ ಸಂಸದ ರಾಧಾ ಮೋಹನ್ ದಾಸ್ ಅಗರ್ವಾಲ್ ಅವರನ್ನು ಮತ್ತು ಕರ್ನಾಟಕದ ಸಹ ಉಸ್ತುವಾರಿಯನ್ನಾಗಿ ಸುಧಾಕರ್ ರೆಡ್ಡಿ ಅವರನ್ನು ನೇಮಕ ಮಾಡಿ ಬಿಜೆಪಿ ಹೈಕಮಾಂಡ್ ಶನಿವಾರ ಆದೇಶ ಹೊರಡಿಸಿದೆ.
