Home ಸುದ್ದಿ ದೇಶ ರಾಜ್ಯ ಬರ ಪರಿಹಾರಕ್ಕೆ ಖರ್ಗೆ ಮನವಿ

ರಾಜ್ಯ ಬರ ಪರಿಹಾರಕ್ಕೆ ಖರ್ಗೆ ಮನವಿ

0

ನವದೆಹಲಿ: ಭೀಕರ ಬರಗಾಲದಿಂದ ತತ್ತರಿಸಿರುವ ಕರ್ನಾಟಕಕ್ಕೆ 18,171 ಕೋಟಿ ರೂಪಾಯಿ ಬಿಡುಗಡೆ ಮಾಡುವಂತೆ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ಅವರು ರಾಜ್ಯ ಸಭೆಯ ಶೂನ್ಯ ವೇಳೆಯಲ್ಲಿ ಸದನದಲ್ಲಿ ವಿಷಯ ಪ್ರಸ್ತಾಪಿಸಿ ಭೀಕರ ಬರಗಾಲದಿಂದ ತತ್ತರಿಸಿರುವ ಕರ್ನಾಟಕಕ್ಕೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿಯಿಂದ (ಎನ್‌ಡಿಆರ್‌ಎಫ್) 18,171 ಕೋಟಿ ರೂಪಾಯಿ ಬಿಡುಗಡೆ ಮಾಡುವಂತೆ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಬುಧವಾರ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದರು.

Exit mobile version