ರಾತ್ರೋರಾತ್ರಿ ನಾಡಧ್ವಜಕ್ಕೆ ಬೆಂಕಿ ಹಚ್ಚಿದ ಪುಂಡರು

0
10

ಬೆಳಗಾವಿ: ಒಂದೆಡೆ ರಾಜ್ಯ ಸರ್ಕಾರ ಕನ್ನಡ ನಾಮಫಲಕ ಕಡ್ಡಾಯ ಮಾಡುತ್ತಿದ್ದಂತೆಯೇ ಒಳಗೊಳಗೇ ಕುದಿಯುತ್ತಿರುವ ಪುಂಡರು ಹೊಸ ವರ್ಷದ ಸಂದರ್ಭದಲ್ಲೇ ರಾತ್ರೋರಾತ್ರಿ ಕನ್ನಡ ಬಾವುಟಕ್ಕೆ ಬೆಂಕಿ ಹಚ್ಚುವ ಮೂಲಕ ಕಿಡಿಗೇಡಿತನ ಮೆರೆದಿದ್ದಾರೆ.
ಬೆಳಗಾವಿ ತಾಲೂಕಿನ ಸುಳಗಾ ಗ್ರಾಮದಲ್ಲಿ ರಾಯಣ್ಣ ವೃತ್ತದ ಬಳಿ ಕಟ್ಟಿದ್ದ ನಾಡಧ್ವಜಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ಪುಂಡರ ಈ ಕೃತ್ಯಕ್ಕೆ ಕನ್ನಡ ಪರ ಹೋರಾಟಗಾರರು ಆಕ್ರೋಶ ಹೊರ ಹಾಕಿದ್ದಾರೆ. ಕೂಡಲೇ ಕಿಡಿಗೇಡಿಗಳನ್ನು ಬಂಧಿಸುವಂತೆ ಹೋರಾಟಗಾರರು ಮನವಿ ಮಾಡಿದ್ದಾರೆ.
ನಾಡಧ್ವಜಕ್ಕೆ ಬೆಂಕಿ ಹಚ್ಚಿದ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ ಹೇಳಿದ್ದಾರೆ.

Previous articleಜಪಾನ್‍ನಲ್ಲಿ ಭೂಕಂಪ: ಸುನಾಮಿ ಎಚ್ಚರಿಕೆ
Next articleಮತಾಂತರ: ಚರ್ಚ್ ಪಾಸ್ಟರ್ ಬಂಧನ