ರಾಮೇಶ್ವರಂ ಕೆಫೆ ಪ್ರಕರಣ: ಹುಬ್ಬಳ್ಳಿಯಲ್ಲಿ ಇಬ್ಬರ ವಶಕ್ಕೆ ಪಡೆದ ಎನ್‌ಐಎ

0
11

ಹುಬ್ಬಳ್ಳಿ: ರಾಮೇಶ್ವರಂ ಕೆಫೆ ಬಾಂಬ್ ಸೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ(ಎನ್‌ಐಎ)ದ ಅಧಿಕಾರಿಗಳು, ವಾಣಿಜ್ಯ ನಗರಿ ಹುಬ್ಬಳ್ಳಿಗೆ ಮಂಗಳವಾರ ಭೇಟಿ ನೀಡಿ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆಗೆ ಕರೆದುಕೊಂಡು ಹೋಗಿದ್ದಾರೆ ಎಂದು ತಿಳಿದು ಬಂದಿದೆ.
ಕಸಬಾಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಸೊಹೆಲ್ ಮಿರ್ಜಾ ಹಾಗೂ ಅಜೀಜ್ ಅಹ್ಮದ್ ಎಂಬುವವರನ್ನು ಬೆಳಗ್ಗೆ ವಶಕ್ಕೆ ಪಡೆದಿರುವ ಎನ್‌ಐಎ ಅಧಿಕಾರಿಗಳು, ಬೆಂಗಳೂರಿಗೆ ಕರೆದುಕೊಂಡು ಹೋಗಿದ್ದಾರೆ ಎಂದು ತಿಳಿದಿದೆ. ಆದರೆ, ಸ್ಥಳೀಯ ಪೊಲೀಸರಿಗೆ ಈ ಕುರಿತು ಮಾಹಿತಿ ಇಲ್ಲ ಎಂದು ತಿಳಿಸಿದ್ದಾರೆ.

Previous articleಸಿಡಿಲು ಬಡಿದು ಯುವಕ ಸಾವು
Next articleಘೋರ ಸಾವಿಗೆ ಹೊಸ ನ್ಯಾಯ