ರಾಮೋಜಿ ಫಿಲ್ಮ್ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ಇನ್ನಿಲ್ಲ

0
7

ಹೈದರಾಬಾದ್‌: ರಾಮೋಜಿ ಗ್ರೂಪ್ಸ್‌ ಸಂಸ್ಥಾಪಕ ರಾಮೋಜಿ ರಾವ್ ಶನಿವಾರ ನಸುಕಿನ ಜಾವ ನಿಧನರಾಗಿದ್ದಾರೆ.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಹೈದರಾಬಾದ್‌ ನ ಸ್ಟಾರ್ ಆಸ್ಪತ್ರೆಯಲ್ಲಿ ಬೆಳಗಿನ ಜಾವ 3:45ಕ್ಕೆ ಕೊನೆಯುಸಿರೆಳೆದಿದ್ದಾರೆ.

ನವೆಂಬರ್ 16, 1936ರಂದು ಆಂಧ್ರಪ್ರದೇಶದ ಕೃಷ್ಣಾ ಜಿಲ್ಲೆಯ ಪೆದಪರುಪುಡಿ ಗ್ರಾಮದಲ್ಲಿ ಕೃಷಿ ಕುಟುಂಬದಲ್ಲಿ ಜನಿಸಿದ ಅವರು, ರಾಮೋಜಿ ಫಿಲ್ಮ್ ಸಿಟಿ ಸೇರಿದಂತೆ ರಾಮೋಜಿ ಸಮೂಹ ಸಂಸ್ಥೆಗಳ ಒಡೆತನದಿಂದ ಅವರು ಮನೋರಂಜನಾ ಹಾಗೂ ಮಾಧ್ಯಮ ಕ್ಷೇತ್ರದಲ್ಲಿ ಖ್ಯಾತಿ ಗಳಿಸಿದ್ದರು.  ವಿಶ್ವದ ಅತಿದೊಡ್ಡ ಥೀಮ್ ಪಾರ್ಕ್ ಮತ್ತು ಫಿಲ್ಮ್ ಸ್ಟುಡಿಯೋ, ರಾಮೋಜಿ ಫಿಲ್ಮ್ ಸಿಟಿಯನ್ನು ಸ್ಥಾಪಿಸಿದರು.

Previous articleಜಾಣರ ಗುರು
Next articleವಾಲ್ಮೀಕಿ ನಿಗಮದ ಹಗರಣಕ್ಕೆ ಮತ್ತೊಬ್ಬ ಸಚಿವರ ಹೆಸರು ತಳುಕು: ಸಿಬಿಐ ಹಸ್ತಾಂತರಕ್ಕೆ ಆಗ್ರಹ