ರಾಯಚೂರು: ರಾಯಚೂರು ಜಿಲ್ಲಾ ಪ್ರವಾಸವನ್ನು ಸಿಎಂ ಸಿದ್ದರಾಮಯ್ಯ ರದ್ದುಗೊಳಿಸಿದ್ದಾರೆ.
ಇಂದು ಬೆಳಗ್ಗೆ 10 ಗಂಟೆಗೆ ವಿಶೇಷ ವಿಮಾನದ ಮೂಲಕ ತೆರಳ ಬೇಕಾಗಿದ್ದ ಸಿಎಂ. ಪಾಕಿಸ್ತಾನದ ಮೇಲೆ ಭಾರತೀಯ ಸೇನೆ ದಾಳಿ ನಡೆಸಿದ ಬೆನ್ನಲ್ಲೇ ಸಿಎಂ ಕಾರ್ಯಕ್ರಮ ರದ್ದು. ಇದೇ ವೇಳೆ ರಾಯಚೂರಿನಲ್ಲಿ ಇಂದು ಹಮ್ಮಿಕೊಂಡಿದ್ದ ಕಾಂಗ್ರೆಸ್ ಪ್ರತಿಭಟನಾ ಸಮಾವೇಶ ಕಾರ್ಯಕ್ರಮ ರದ್ದಾಗಿದೆ. ಇನ್ನು 11.30 ಕ್ಕೆ ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ಪತ್ರಿಕಾಗೋಷ್ಠಿ ಇದ್ದು ಸಿಎಂ ಸಿದ್ದರಾಮಯ್ಯ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಲಿದ್ದಾರೆ.