ರಾಯಚೂರು ಮಾಜಿ ಡಿಸಿ ಕುಂಭಮೇಳದಲ್ಲಿ ಸನ್ಯಾಸಿ!

0
18

ರಾಯಚೂರು: ಈ ಹಿಂದೆ ರಾಯಚೂರು ಜಿಲ್ಲಾಧಿಕಾರಿಯಾಗಿದ್ದ ನಿವೃತ್ತ ಐಎಎಸ್ ಅಧಿಕಾರಿ ಐ.ಆರ್.ಪೆರುಮಾಳ ಅವರು ಮಹಾಕುಂಭ ಮೇಳದಲ್ಲಿ ಸನ್ಯಾಸಿಯಾಗಿ ಪ್ರತ್ಯಕ್ಷರಾಗಿದ್ದಾರೆ.
ಗಂಟು ಕಟ್ಟಿದ ಕೂದಲು ಇರುವ ಫೋಟೋ ಈಗ ಫುಲ್ ವೈರಲ್ ಆಗಿದ್ದು, ಅವರ ವೈರಾಗ್ಯ ಜೀವನ ರಾಜ್ಯದ ಜನತೆಗೆ ಅಚ್ಚರಿ ಮೂಡಿಸಿದೆ. ೧೯೯೩-೯೪ರಲ್ಲಿ ರಾಯಚೂರು ಜಿಲ್ಲಾಧಿಕಾರಿಯಾಗಿದ್ದ ಅಧಿಕಾರಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸಿದ್ದರು. ರಾಜ್ಯದ ವಿವಿಧ ಇಲಾಖೆಗಳಲ್ಲಿ ಕರ್ತವ್ಯ ನಿರ್ವಹಿಸಿ ೨೦೧೨ರಲ್ಲಿ ಅವರು ನಿವೃತ್ತರಾಗಿದ್ದರು. ೨೦೧೪ರಲ್ಲಿ ತಮಿಳುನಾಡಿನ ಮದುರೈ ಜಿಲ್ಲೆಯ ಇರಂಜುಮುಡಿ ಶಿವನ ದೇವಾಲಯ ಬಳಿ ಮಠ ಕಟ್ಟಿಕೊಂಡಿದ್ದರು. ಸನ್ಯಾಸತ್ವ ಸ್ವೀಕರಿಸಿ ಶಿವಯೋಗಿ ಪೆರುಮಾಳ್ ಸ್ವಾಮೀಜಿಯಾಗಿದ್ದ ನಿವೃತ್ತ ಅಧಿಕಾರಿ ಮಹಾ ಕುಂಭಮೇಳದಲ್ಲಿ ಕಾಣಿಸಿಕೊಂಡಿದ್ದಾರೆ ಎನ್ನಲಾಗುವ ಫೋಟೋ ಈಗ ವೈರಲ್ ಆಗಿ ರಾಜ್ಯದ ಜನರ ಗಮನ ಸೆಳೆದಿದೆ.

Previous articleಬ್ರಾಹ್ಮಣ ಮಹಾಸಭೆಯಿಂದ ಬಡ ಬ್ರಾಹ್ಮಣರಿಗೆ ಸೂರು
Next articleಧರ್ಮೋ ರಕ್ಷತಿ ರಕ್ಷಿತಃ