ರಾಯಣ್ಣ ಕನ್ನಡ ನಾಡು, ನುಡಿ, ನೆಲ, ಜಲಕ್ಕೆ ಗೌರವ ನೀಡುವ ಬದುಕು ನಮಗೆಲ್ಲ ಸ್ಫೂರ್ತಿ

ಬೆಂಗಳೂರು: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಬದುಕು ಸ್ಫೂರ್ತಿದಾಯಕವಾಗಿದ್ದು, ಅವರ ಆದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಗೌರವ ಸಲ್ಲಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಅವರು ಇಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ 194ನೇ ಪುಣ್ಯಸ್ಮರಣೆ ಅಂಗವಾಗಿ ರಾಯಣ್ಣನವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ಮಾತನಾಡಿ ಕಿತ್ತೂರು ರಾಣಿ ಚೆನ್ನಮ್ಮನವರ ಬಲಗೈ ಬಂಟನಾಗಿ ಹೋರಾಡಿದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರು ಅಪ್ರತಿಮ ದೇಶಭಕ್ತರಾಗಿದ್ದರು. ಬ್ರಿಟೀಷರ ವಿರುದ್ಧ ಸೆಣೆಸಲು ಗೆರಿಲ್ಲಾ ಯುದ್ಧತಂತ್ರಗಾರಿಕೆಯನ್ನು ಬಳಸಿದ್ದರು. ಭಾರತದ ಶ್ರೇಷ್ಠ ಸ್ವಾತಂತ್ರ್ಯ ಹೋರಾಟಗಾರರಾಗಿದ್ದ ಸಂಗೊಳ್ಳಿ ರಾಯಣ್ಣನವರು ಕನ್ನಡ ನಾಡು, ನುಡಿ, ನೆಲ, ಜಲಕ್ಕೆ ಅತೀವ ಗೌರವ ನೀಡುವ ಅವರ ಬದುಕು ನಮಗೆಲ್ಲ ಸ್ಫೂರ್ತಿ ಎಂದರು.