Home ತಾಜಾ ಸುದ್ದಿ ರಾಷ್ಟ್ರದ್ರೋಹಿಗಳ ಪಟ್ಟಿಗೆ ಸಿಎಂ ಸೇರಿಸಿ

ರಾಷ್ಟ್ರದ್ರೋಹಿಗಳ ಪಟ್ಟಿಗೆ ಸಿಎಂ ಸೇರಿಸಿ

0

ಶಿವಮೊಗ್ಗ: ಕಾಶ್ಮೀರದಲ್ಲಿ ನಡೆದ ಭಯೋತ್ಪಾದಕ ಘಟನೆಯನ್ನು ಇಡೀ ವಿಶ್ವವೇ ಖಂಡಿಸಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೂಡ ರಾಷ್ಟ್ರದ ವಿಚಾರಕ್ಕೆ ಬಂದಾಗ ನಾವೆಲ್ಲಾ ಒಗ್ಗಟಾಗಿ ಇರಬೇಕು ಎಂದಿದ್ದಾರೆ. ಕಾಶ್ಮೀರದ ಮುಖ್ಯಮಂತ್ರಿ ಕೂಡ ತಮ್ಮ ವೈಫಲ್ಯ ಒಪ್ಪಿಕೊಂಡಿದ್ದಾರೆ. ಆದರೆ, ಕರ್ನಾಟಕದ ಮುಖ್ಯಮಂತ್ರಿ ಸಿದ್ಧರಾಮಯ್ಯ ಮಾತ್ರ ಮುಸಲ್ಮಾನರ ಚೇಲಾಗಳಂತೆ ಮಾತನಾಡುತ್ತಿದ್ದಾರೆ. ಆದ್ದರಿಂದ ಅವರನ್ನು ರಾಷ್ಟ್ರದ್ರೋಹಿಗಳ ಪಟ್ಟಿಯಲ್ಲಿ ಸೇರಿಸಬೇಕು ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಒತ್ತಾಯಿಸಿದರು.
ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮುಖ್ಯಮಂತ್ರಿ ಸಿದ್ಧರಾಮಯ್ಯ, ಸಚಿವ ಸಂತೋಷ್‌ಲಾಡ್, ಆರ್.ಬಿ.ತಿಮ್ಮಾಪುರ ಮತ್ತಿತರ ಕಾಂಗ್ರೆಸ್ ನಾಯಕರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಹೈಕಮಾಂಡ್ ಇದು ಪಕ್ಷದ ಅಭಿಪ್ರಾಯ ಅಲ್ಲ ಎನ್ನುತ್ತಿದೆ. ಈ ಹೇಳಿಕೆ ಕೊಟ್ಟವರನ್ನು ಕಾಂಗ್ರೆಸ್ ಏಕೆ ಪಕ್ಷದಲ್ಲಿ ಇಟ್ಟುಕೊಂಡಿದೆ? ಕೂಡಲೇ ಕಾಂಗ್ರೆಸ್ ಇವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದರು.
ಬೆಳಗಾವಿ ಕಾರ್ಯಕ್ರಮವೊಂದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪೊಲೀಸ್ ಅಧಿಕಾರಿಯೊಬ್ಬರ ಮೇಲೆ ಕೈ ಮಾಡಿದ್ದನ್ನು ನೋಡಿದರೆ ರಾಜ್ಯದಲ್ಲಿ ಯಾರಿಗೂ ರಕ್ಷಣೆ ಇಲ್ಲ. ಇದು ಮುಖ್ಯಮಂತ್ರಿಗಳ ಭಂಡತನದ ಪರಮಾವಧಿ ಎನ್ನುವುದು ಬಹಿರಂಗವಾಗಿದೆ. ಮುಖ್ಯಮಂತ್ರಿಗಳು ತಕ್ಷಣ ಪೊಲೀಸರ, ರಾಜ್ಯದ ಜನತೆಯ ಕ್ಷಮೆ ಯಾಚಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಆಗ್ರಹಿಸಿದರು.
ಜಿಪಂ ಮಾಜಿ ಸದಸ್ಯ ಕೆ.ಇ.ಕಾಂತೇಶ್ ಮಾತನಾಡಿ, ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಎದುರು ಗಡೆ ಇರುವ ಮಹಾನಗರ ಪಾಲಿಕೆಗೆ ಸೇರಿದ ಜಾಗದಲ್ಲಿ ಪ್ರತಿಭಟನೆ ಮಾಡಲು ಮುಸ್ಲಿಂ ಸಂಘಟನೆ ಜಿಲ್ಲಾಡಳಿತಕ್ಕೆ ಅನುಮತಿ ಕೇಳಿದೆ ಎಂದು ತಿಳಿದುಬಂದಿದೆ. ಯಾವುದೇ ಕಾರಣಕ್ಕೂ ಆ ಜಾಗದಲ್ಲಿ ಪ್ರತಿಭಟನೆ ಮಾಡಲು ಅವಕಾಶ ಕೊಡಬಾರದು. ಕೊಟ್ಟರೆ ಇಡೀ ಶಿವಮೊಗ್ಗದ ಹಿಂದೂ ಮತ್ತು ರಾಷ್ಟ್ರಭಕ್ತರು ಪ್ರತಿಭಟನೆ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

Exit mobile version