ರಾಷ್ಟ್ರಮಟ್ಟದಲ್ಲಿ ಕನ್ನಡ ಸಿನಿಮಾಗಳ ಕಮಾಲ್

0
27

ಕೆಜಿಎಫ್, ಕಾಂತಾರ ಚಿತ್ರಗಳಿಗೆ ಬಂಪರ್

ಬೆಂಗಳೂರು: 70 ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ 2022ರ ಸಾಲಿನ ಪ್ರಶಸ್ತಿಗಳ ಪಟ್ಟಿ ಪ್ರಕಟವಾಗಿದೆ.


ನವದೆಹಲಿಯ ರಾಷ್ಟ್ರೀಯ ಮಾಧ್ಯಮ ಕೇಂದ್ರದಲ್ಲಿ ಇಂದು ಅತ್ಯುತ್ತಮ ಸಿನಿಮಾಗಳು ಹಾಗೂ ನಟ, ನಟಿಯರ ಹೆಸರನ್ನು ಪ್ರಕಟಿಸಲಾಯಿತು. ‘ಕಾಂತಾರಾ’ ಚಿತ್ರದ ಅಭಿನಯಕ್ಕಾಗಿ ರಿಷಬ್ ಶೆಟ್ಟಿ ಅತ್ಯುತ್ತಮ ನಟ ಪ್ರಶಸ್ತಿ ಪಡೆದಿದ್ದು, ರಾಕಿಂಗ್ ಸ್ಟಾರ್ ಯಶ್ ನಟನೆಯ ಕೆಜಿಎಫ್-2 ಅತ್ಯುತ್ತಮ ಕನ್ನಡ ಚಿತ್ರವಾಗಿ ರಾಷ್ಟ್ರ ಪ್ರಶಸ್ತಿ ಪಡೆದುಕೊಂಡಿದೆ. ಸಾಹಸ ನಿರ್ದೇಶನ ವಿಭಾಗದಲ್ಲೂ ಕೆಜಿಎಫ್-2 ಪ್ರಶಸ್ತಿ ಗೆದ್ದಿದೆ. 32 ಭಾಷೆಗಳ 309 ಸಿನಿಮಾಗಳು ಸ್ಪರ್ಧೆಗೆ ಅರ್ಜಿ ಸಲ್ಲಿಸಿದ್ದವು. ಫೀಚರ್ ಸಿನಿಮಾ ಕ್ಯಾಟಗರಿಯಲ್ಲಿ 27 ಪ್ರಶಸ್ತಿಗಳನ್ನು ನೀಡಲಾಗಿದೆ.

Previous articleವಿಧಾನಸಭಾ ಚುನಾವಣಾ ದಿನಾಂಕ ಪ್ರಕಟ
Next articleಶೃಂಗೇರಿ ಮಠಕ್ಕೆ ಕೇಂದ್ರ ಸಚಿವ ವಿ.ಸೋಮಣ್ಣ ಭೇಟಿ