Home ತಾಜಾ ಸುದ್ದಿ ರಾಷ್ಟ್ರೀಯ ಬ್ಯಾಂಕ್‌ಗಳನ್ನ ಏಕಾಏಕಿ ನಿಷೇಧಿಸುವುದು ಎಷ್ಟು ಸರಿ?

ರಾಷ್ಟ್ರೀಯ ಬ್ಯಾಂಕ್‌ಗಳನ್ನ ಏಕಾಏಕಿ ನಿಷೇಧಿಸುವುದು ಎಷ್ಟು ಸರಿ?

0

ಬೆಂಗಳೂರು: ರಾಜ್ಯ ಸರ್ಕಾರಕ್ಕೆ ಏನಾದರೂ ತಕರಾರಿಲ್ಲ ಆರ್‌ಬಿಐಗೆ ದೂರು ಸಲ್ಲಿಸಬೇಕೆ ಹೊರತು ಈ ರೀತಿ ರಾಷ್ಟ್ರೀಯ ಬ್ಯಾಂಕ್‌ಗಳನ್ನ ಏಕಾಏಕಿ ನಿಷೇಧಿಸುವುದು ಎಷ್ಟು ಸರಿ? ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಪ್ರಶ್ನಿಸಿದ್ದಾರೆ.

ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮತ್ತು ಪಂಜಾಬ್ ನ್ಯಾಶನಲ್ ಬ್ಯಾಂಕ್‌ಗಳಲ್ಲಿ ಹೊಂದಿರುವ ಖಾತೆಗಳನ್ನು ಮುಕ್ತಾಯಗೊಳಿಸಲು ಎಲ್ಲಾ ಇಲಾಖೆಗಳು, ಸಾರ್ವಜನಿಕ ಉದ್ದಿಮೆಗಳು, ನಿಗಮ-ಮಂಡಳಿಗಳು, ಸ್ಥಳೀಯ ಸಂಸ್ಥೆಗಳು, ವಿಶ್ವವಿದ್ಯಾಲಯಗಳಿಗೆ ಸುತ್ತೋಲೆ ಹೊರಡಿಸಿರುವ ರಾಜ್ಯ ಸರ್ಕಾರದ ನಡೆ ಅತ್ಯಂತ ಅಸಂಬದ್ಧವಾಗಿದ್ದು, ಹಲವಾರು ಅನುಮಾನಗಳಿಗೆ ಎಡೆ ಮಾಡಿಕೊಡುತ್ತಿದೆ. ಸಿಎಂ ಸಿದ್ದರಾಮಯ್ಯನವರೇ, ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ಸಂಬಂಧಿಸಿದ ಯೂನಿಯನ್ ಬ್ಯಾಂಕ್ ಖಾತೆಗಳು 187 ಕೋಟಿ ರೂಪಾಯಿ ಅವ್ಯವಹಾರ ನಡೆದಿರುವುದು ಈಗ ಜಗಜ್ಜಾಹೀರಾಗಿದೆ. ಅವ್ಯವಹಾರ ನಡೆದಿದೆ ಎನ್ನುವುದೇ ಇದಕ್ಕೆ ಕಾರಣ, ಯ್ಯುನಿಯನ್ ಬ್ಯಾಂಕ್ ಖಾತೆಗಳಿಗೆ ಈ ಆದೇಶ ಯಾಕೆ ಅನ್ವಯಿಸುವುದಿಲ್ಲ? ಎಸ್‌ಬಿಐ ಮತ್ತು ಪಿಎನ್‌ಬಿ ಬ್ಯಾಂಕ್‌ಗಳಿಗೆ ಮಾತ್ರ ಏಕೆ ನಿಷೇಧ? ರಾಷ್ಟ್ರೀಕೃತ ಬ್ಯಾಂಕ್ ಸೇರಿದಂತೆ ಎಲ್ಲಾ ವಾಣಿಜ್ಯ ಬ್ಯಾಂಕ್‌ಗಳು ​​ಆರ್‌ಬಿಐ ನಿಯಂತ್ರಣದಲ್ಲಿರುತ್ತವೆ. ರಾಜ್ಯ ಸರ್ಕಾರಕ್ಕೆ ಏನಾದರೂ ತಕರಾರಿಲ್ಲ ಆರ್‌ಬಿಐಗೆ ದೂರು ಸಲ್ಲಿಸಬೇಕೆ ಹೊರತು ಈ ರೀತಿ ರಾಷ್ಟ್ರೀಯ ಬ್ಯಾಂಕ್‌ಗಳನ್ನ ಏಕಾಏಕಿ ನಿಷೇಧಿಸುವುದು ಎಷ್ಟು ಸರಿ? ಇದು ಆರ್ ಬಿಐ ಅಂತಹ ಸ್ವಾಯತ್ತ ಸಂಸ್ಥೆಗೆ ಮಾಡಿದ ಅಪಮಾನವಲ್ಲವೇ? ತಮ್ಮ ಸರ್ಕಾರದಲ್ಲಿ ನಡೆಯುತ್ತಿರುವ ಸರಣಿ ಹಗರಣಗಳ ನಡುವೆ ಏಕಾಏಕಿ ಈ ರೀತಿ ಸುತ್ತೋಲೆ ಹೊರಡಿಸಿರುವುದು ಸಾರ್ವಜನಿಕರಲ್ಲಿ ಸಾಕಷ್ಟು ಅನುಮಾನ ಮೂಡಿಸಿದೆ. ಈ ನಿಗೂಢ ನಡೆಯ ಹಿಂದಿರುವ ನಿಜವಾದ ಉದ್ದೇಶವೇನು ಎಂಬುದು ಸ್ಪಷ್ಟವಾಗಿದೆ. ಅಲ್ಲಿವರೆಗೂ ಈ ಸುತ್ತೋಲೆಯನ್ನು ಹಿಂಪಡೆಯಬೇಕು ಎಂದು ನಾನು ಬಯಸುತ್ತೇನೆ ಎಂದಿದ್ದಾರೆ.

Exit mobile version