ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಹೊಸ ಟೋಲ್: ಸ್ಥಳೀಯರಿಂದ ತೀವ್ರ ವಿರೋಧ

0
37

ಹಾಸನ: ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಮತ್ತೊಂದು ಟೋಲ್ ಆರಂಭವಾಗಿದ್ದು, ಸ್ಥಳೀಯರಿಂದ ತೀವ್ರ ವಿರೋಧ ವ್ಯಕ್ತವಾಗಿದೆ.
ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನ ಚೌಲಗೆರೆ ಗ್ರಾಮದ ಬಳಿ ಹೊಸದಾಗಿ ಟೋಲ್ ಆರಂಭಿಸಿ ಟೋಲ್‌ ಸಂಗ್ರಹ ಖಂಡಿಸಿ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನಾಕಾರರು ನಿರ್ಧರಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವಿರುದ್ಧ ವಾಹನ ಸವಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಸ್ತೆ ಸಮರ್ಪಕವಾಗಿ ಇಲ್ಲದಿದ್ದರೂ ಟೋಲ್ ಸಂಗ್ರಹ ಮಾಡಲಾಗುತ್ತಿದೆ ಎಂದು ಸ್ಥಳೀಯರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದಕ್ಕೆ ಸ್ಥಳೀಯರು ಹಾಗೂ ವಾಹನ ಸವಾರರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಟೋಲ್ ಸಂಗ್ರಹ ಖಂಡಿಸಿ ಕನ್ನಡ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ರಸ್ತೆ ಸಮರ್ಪಕವಾಗಿ ಇಲ್ಲದಿದ್ದರೂ ಟೋಲ್ ಸಂಗ್ರಹ ಮಾಡಲಾಗುತ್ತಿದೆ. ಪ್ರತಿ 50ರಿಂದ 60 ಕಿಲೋ ಮೀಟರ್ ಅಂತರದಲ್ಲಿ ಸುಂಕ ವಸೂಲಿ ಕೇಂದ್ರ ಇರಬೇಕು ಎಂಬ ನಿಯಮ ಇದೆ. ಆದರೆ, ಆಲೂರು ತಾಲೂಕಿನ ಚೌಲಗೆರೆ ಗ್ರಾಮದ ಬಳಿಯ ಟೋಲ್‌ಗೂ ಶಾಂತಿಗ್ರಾಮ ಸುಂಕ ವಸೂಲಿ ಕೇಂದ್ರಕ್ಕೂ 30 ಕಿಲೋ ಮೀಟರ್ ಅಷ್ಟೇ ಅಂತರ ಇದೆ. ನಿಯಮ ಮೀರಿ ಟೋಲ್ ಸಂಗ್ರಹ ಮಾಡಲಾಗುತ್ತಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Previous articleಅಂಚೆ ಪತ್ರದಲ್ಲಿ ಬಂತು ಡಾಲಿ ಮದುವೆ ಆಮಂತ್ರಣ
Next article150 ಕೋಟಿ ಆರೋಪ: ವಿಷಯ ಡೈವರ್ಟ್‌ ಮಾಡುವ ಹುನ್ನಾರ