ನವದೆಹಲಿ: ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು ಮಹಾರಾಷ್ಟ್ರ ಚುನಾವಣೆಯಲ್ಲಿ ಹಲವು ಅಕ್ರಮ ನಡೆದಿದೆ ಎಂದು ಹೇಳುವ ಮೂಲಕ ಚುನಾವಣಾ ಆಯೋಗದ ಮೇಲೆ ಗಂಭೀರ ಆರೋಪ ಮಾಡಿದ್ದರು. ಇದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯೆ ನೀಡಿರುವ ಚುನಾವಣಾ ಆಯೋಗವು, ಲಿಖಿತವಾಗಿ ಪ್ರತಿಕ್ರಿಯಿಸುವುದಾಗಿ ಹೇಳಿದ್ದು, ರಾಜಕೀಯ ಪಕ್ಷಗಳು ನೀಡುವ ಅಭಿಪ್ರಾಯಗಳು, ಸಲಹೆಗಳು ಮತ್ತು ಪ್ರಶ್ನೆಗಳನ್ನು ಆಯೋಗವು ಆಳವಾಗಿ ಗೌರವಿಸುತ್ತದೆ ಎಂದಿದೆ.
ಸೋಲು ಸನ್ನಿಹಿತ ಆರೋಪ ಅಪರಿಮಿತ: ಇನ್ನು ಮಹಾರಾಷ್ಟ್ರದ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಭಾರಿ ಅಕ್ರಮ ನಡೆದಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಆರೋಪಕ್ಕೆ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಪ್ರತಿಕ್ರಿಯಿಸಿದ್ದು, ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷಕ್ಕೆ ಸೋಲು ಸನ್ನಿಹಿತವಾಗಿರುವುದರಿಂದ ಇಂತಹ ಆರೋಪ ಮಾಡಲಾಗಿದೆ ಎಂದು ತಿರುಗೇಟು ನೀಡಿದ್ದಾರೆ.