Home ನಮ್ಮ ಜಿಲ್ಲೆ ಗದಗ ರಾಹುಲ್ ಗಾಂಧಿ ಅಸಮರ್ಥ ನಾಯಕ

ರಾಹುಲ್ ಗಾಂಧಿ ಅಸಮರ್ಥ ನಾಯಕ

0
ಬಸವರಾಜ ಬೊಮ್ಮಾಯಿ

ಗದಗ: ರಾಹುಲ್ ಗಾಂಧಿ ಅತ್ಯಂತ ಅಸಮರ್ಥ ನಾಯಕ. ದೇಶದ ಬಗ್ಗೆ ವಿದೇಶದಲ್ಲಿ ಅವಮಾನಕರವಾಗಿ ಮಾತನಾಡುವ ನಾಯಕ, ಹೀಗಾಗಿ ಅವರನ್ನು ಪ್ರಧಾನಿ ಅಭ್ಯರ್ಥಿ ಎಂದು ಘೋಷಣೆ ಮಾಡುತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಗದಗ ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ರೋಣ ವಿಧಾನಸಬಾ ಕ್ಷೇತ್ರದ ಡಂಬಳದಲ್ಲಿ ನಡೆದ ಸಮಾವೇಶದಲ್ಲಿ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡು ಮಾತನಾಡಿದರು. ಈ ಚುನಾವಣೆಯಲ್ಲಿ ನರೇಂದ್ರ ಮೋದಿ ಹಾಗೂ ರಾಹುಲ್ ಗಾಂಧಿ ನಡುವೆ ನಡೆಯುವ ಚುನಾವಣೆ. ರಾಹುಲ್ ಗಾಂಧಿ ಒಬ್ಬ ಅಸಮರ್ಥ ನಾಯಕರಾಗಿದ್ದು, ಅದೇ ಕಾರಣಕ್ಕೆ ಕಾಂಗ್ರೆಸ್ ಅವರನ್ನು ಪ್ರಧಾನಿ ಅಭ್ಯರ್ಥಿ ಎಂದು ಘೋಷಣೆ ಮಾಡುತ್ತಿಲ್ಲ. ನಾವು ಮೋದಿಯವರನ್ನು ಪ್ರಧಾನಿ ಅಭ್ಯರ್ಥಿ ಎಂದು ಘೊಷಣೆ ಮಾಡಿದ್ದೇವೆ. ಜನರು ಮೋದಿಯವರನ್ನು ಆಯ್ಕೆ ಮಾಡುತ್ತಾರೆ ಎಂದರು.
ಇಡೀ ದೇಶದಲ್ಲಿ ಮೋದಿ ಸುನಾಮಿ ಇದೆ. ಹಾವೇರಿ ಗದಗ ಲೋಕಸಭಾ ಕ್ಷೇತ್ರದಲ್ಲೂ ಮೋದಿಯವರ ಸುನಾಮಿ ಇದೆ. ದೇಶದ ಅತ್ಯಂತ ದಿಟ್ಟ ನಾಯಕ ನರೇಂದ್ರ ಮೋದಿ ಇದ್ದಾರೆ. ಇನ್ನೊಂದು ಕಡೆ ರಾಹುಲ್ ಗಾಂಧಿ ಪ್ರಧಾನಿ ಅಭ್ಯರ್ಥಿ ಅಂತ ಯಾಕೆ ಹೇಳುತ್ತಿಲ್ಲ ಎಂದು ಪ್ರಶ್ನಿಸಿದರು.

Exit mobile version