ಕೊಪ್ಪಳ: ವಿದೇಶದಲ್ಲಿ ರಾಹುಲ್ ಗಾಂಧಿ ನೀಡಿದ ದಲಿತ ವಿರೋಧಿ ಹೇಳಿಕೆ ಖಂಡಿಸಿ ನಗರದ ಬಸವೇಶ್ವರ ವೃತ್ತದಲ್ಲಿ ಗುರುವಾರ ಬಿಜೆಪಿ ಜಿಲ್ಲಾ ಘಟಕದ ನೇತೃತ್ವದಲ್ಲಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಟೈರ್ ಗೆ ಬೆಂಕಿ ಹಚ್ಚಿ ರಾಹುಲ್ ಗಾಂಧಿ ಭಾವಚಿತ್ರಕ್ಕೆ ಚಪ್ಪಲಿಯಿಂದ ಹೊಡೆದು, ಬಳಿಕ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.
ಬಿಜೆಪಿ ಜಿಲ್ಲಾಧ್ಯಕ್ಷ ನವೀನ್ ಗುಳಗಣ್ಣನವರ, ಎಂಎಲ್ಸಿ ಹೇಮಲತಾ ನಾಯಕ್, ಮಾಜಿ ಶಾಸಕ ಬಸವರಾಜ ದಡೇಸಗೂರು, ರಾಜ್ಯ ಕಾರ್ಯಕಾರಣಿ ಸದಸ್ಯ ಡಾ.ಬಸವರಾಜ ಕ್ಯಾವಟರ್, ಪ್ರದೀಪ್ ಹಿಟ್ನಾಳ್, ಎಸ್ಸಿ ಮೋರ್ಚಾ ಜಿಲ್ಲಾಧ್ಯಕ್ಷ ಗಣೇಶ ಹೊರತಟ್ನಾಳ್, ಪ್ರಾಣೇಶ ಮಾದಿನೂರು, ವೀರಣ್ಣ ಸಜ್ಜನ್, ಅಜ್ಜಯ್ಯ ಪಾಟೀಲ್, ಕೀರ್ತಿ ಪಾಟೀಲ್, ಶೋಭಾ ನಗರಿ ಇದ್ದರು.