ರಿಯಲ್ ಎಸ್ಟೇಟ್ ಆರ್ಥಿಕತೆಯ ಪ್ರಮುಖ ಭಾಗ

0
20

ಬೆಂಗಳೂರು: ರಿಯಲ್ ಎಸ್ಟೇಟ್ ಕ್ಷೇತ್ರವು ನಮ್ಮ ಆರ್ಥಿಕತೆಯ ಪ್ರಮುಖ ಭಾಗವಾಗಿದೆ ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ.
ಈ ಕುರತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು 14ನೇ ಸಿಎನ್‌ಬಿಸಿ-ಆವಾಜ್ ರಿಯಲ್ ಎಸ್ಟೇಟ್ ಅವಾರ್ಡ್ಸ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದು ಸಂತಸ ತರಿಸಿತು. ರಿಯಲ್ ಎಸ್ಟೇಟ್ ಕ್ಷೇತ್ರವು ನಮ್ಮ ಆರ್ಥಿಕತೆಯ ಪ್ರಮುಖ ಭಾಗವಾಗಿದೆ. ರಾಜ್ಯದ ಅಭಿವೃದ್ಧಿ, ಉದ್ಯೋಗ ಮತ್ತು ನಾವೀನ್ಯತೆಗಳಿಗೆ ಉತ್ತಮ ಕೊಡುಗೆ ನೀಡುತ್ತಲೇ ಬಂದಿದೆ. ಬೆಂಗಳೂರಿನ ಹೊರವಲಯದಲ್ಲಿ 2000 ಎಕರೆ ಪ್ರದೇಶದಲ್ಲಿ KHIR ಸಿಟಿ ಸ್ಥಾಪಿಸುವ ಯೋಜನೆ ಘೋಷಿಸಿದ್ದೇವೆ. ರಿಯಲ್ ಎಸ್ಟೇಟ್ ಡೆವಲಪರ್ ಗಳ ಕಡೆಯಿಂದ ಕಾರ್ಯತಂತ್ರವನ್ನು ಅರ್ಥಮಾಡಿಕೊಳ್ಳಲು ಇದು ಉತ್ತಮ ಅವಕಾಶವಾಗಿದೆ. ವಿಜೇತರಿಗೆ ಅಭಿನಂದನೆಗಳು ಮತ್ತು ಭಾರತೀಯ ರಿಯಲ್ ಎಸ್ಟೇಟ್‌ನಲ್ಲಿನ ಶ್ರೇಷ್ಠತೆಯನ್ನು ಗುರುತಿಸಿದ್ದಕ್ಕಾಗಿ CNBC-Awaz ಗೆ ಧನ್ಯವಾದಗಳು ಎಂದಿದ್ದಾರೆ.

Previous articleದ್ವೇಷದ ರಾಜಕಾರಣಕ್ಕೆ ಮತ್ತೊಂದು ಹೆಸರೇ ಕಾಂಗ್ರೆಸ್
Next articleಬೆಳಗಾವಿಯಿಂದ ಜಗದೀಶ್ ಶೆಟ್ಟರ್ ಸ್ಪರ್ಧೆ ಬಹುತೇಕ ನಿಶ್ಚಿತ