ರಿಯಲ್ ಸ್ಟಾರ್ ಹುಟ್ಟುಹಬ್ಬ: ಬಹು ನಿರೀಕ್ಷಿತ “45” ಚಿತ್ರದ ವಿಶೇಷ ಪೋಸ್ಟರ್

0
16

ಕರುನಾಡ ‌ಚಕ್ರವರ್ತಿ ಡಾ||ಶಿವರಾಜಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಅಭಿನಯದ, ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಚೊಚ್ಚಲ ನಿರ್ದೇಶನದ ಹಾಗೂ ಸೂರಜ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಶ್ರೀಮತಿ ಉಮಾ ರಮೇಶ್ ರೆಡ್ಡಿ ಅವರು ನಿರ್ಮಿಸುತ್ತಿರುವ ಬಹು ನಿರೀಕ್ಷಿತ “45” ಚಿತ್ರ ಆರಂಭದಿಂದಲೂ ಸಾಕಷ್ಟು ಕುತೂಹಲ ಮೂಡಿಸಿದೆ.

ಸೆಪ್ಟೆಂಬರ್ 18, ರಿಯಲ್ ಸ್ಟಾರ್ ಉಪೇಂದ್ರ ಅವರ ಹುಟ್ಟುಹಬ್ಬ. ಈ ಸಂದರ್ಭದಲ್ಲಿ ವಿಶೇಷ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ “45” ಚಿತ್ರತಂಡ ಉಪೇಂದ್ರ ಅವರಿಗೆ ಜನ್ಮದಿನದ ಶುಭಾಶಯ ತಿಳಿಸಿದೆ. ಉಪೇಂದ್ರ ಅವರ ನಿವಾಸಕ್ಕೆ “45” ಚಿತ್ರದ ನಿರ್ಮಾಪಕ ರಮೇಶ್ ರೆಡ್ಡಿ, ನಿರ್ದೇಶಕ ಅರ್ಜುನ್ ಜನ್ಯ ಮುಂತಾದವರು ಭೇಟಿ ನೀಡಿ ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ.

Previous articleಪಾಕ್ ಧ್ವಜದ ರೀಲ್ಸ್ : ಹಿಂದೂ ಸಂಘಟನೆಗಳಿಂದ ಪ್ರತಿಭಟನೆ
Next articleಮಾದಕ ವಸ್ತು ಜಾಲ ಬುಡಸಮೇತ ಕಿತ್ತೆಸೆಯಲು ಕಠಿಣ ಕ್ರಮ