Home ಸುದ್ದಿ ರೂಪಾ-ರೋಹಿಣಿ ಕಚ್ಚಾಟ: ಸಿಎಂ ಸೂಕ್ತ ಕ್ರಮ ಕೈಗೊಳ್ಳಲಿದ್ದಾರೆ

ರೂಪಾ-ರೋಹಿಣಿ ಕಚ್ಚಾಟ: ಸಿಎಂ ಸೂಕ್ತ ಕ್ರಮ ಕೈಗೊಳ್ಳಲಿದ್ದಾರೆ

0
ರೋಹಿಣಿ

ಬೆಂಗಳೂರು : ಐಪಿಎಸ್ ಅಧಿಕಾರಿ ಡಿ.ರೂಪಾ ಹಾಗೂ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಯವರ ನಡುವಿನ ಕಿತ್ತಾಟ ಅತಿರೇಕಕ್ಕೇರಿದ ಬೆನ್ನಲ್ಲೇ ಇಬ್ಬರಿಗೂ ನೋಟಿಸ್ ಜಾರಿಗೊಳಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮುಖ್ಯ ಕಾರ್ಯದರ್ಶಿ ವಂದಿತಾ ಅವರಿಗೆ ಸೂಚಿಸಿದ್ದಾರೆ. ಅಧಿಕಾರಿಗಳ ನಡುವಿನ ಕಿತ್ತಾಟದ ಕುರಿತು ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯಿಸಿದ್ದು, ಅಧಿಕಾರಿಗಳ ಈ ವರ್ತನೆಗಳಿಂದ ನನಗೆ ಬಹಳ ಬೇಸರವಾಗಿದೆ. ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳನ್ನು ಜನ ದೇವಮಾನವರೆಂದುಕೊಂಡಿದ್ದಾರೆ. ಆದರೆ ಇವರಿಂದ ಎಲ್ಲಾ ಅಧಿಕಾರಿಗಳಿಗೂ ಅಪಮಾನವಾಗಿದೆ ಎಂದಿದ್ದಾರೆ.

Exit mobile version